ನವದೆಹಲಿ:ಲೋಕಸಭೆ ಚುನಾವಣೆಯ ನಡುವೆ ಬಾಲಿವುಡ್​ ನಟ ಶೇಖರ್ ಸುಮನ್ ಹಾಗೂ ಕಾಂಗ್ರೆಸ್​ನ ಮಾಜಿ ನಾಯಕಿ ರಾಧಿಕಾ ಖೇರಾ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:ಇವಿಎಂ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಾ..
ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಮನ್ವಯಾಧಿಕಾರಿಯಾದ ಖೇರಾ ಪಕ್ಷದ ಛತ್ತೀಸ್‌ಗಢದ ಕಚೇರಿಯಲ್ಲಿ ಮತ್ತೊಬ್ಬ ನಾಯಕನೊಂದಿಗೆ ವಾಗ್ವಾದ ನಡೆಸಿದ ಮಾರನೇ ದಿನ ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ರಾಮ ಮಂದಿರಕ್ಕೆ ಭೇಟಿ ನೀಡಿ ಚಿತ್ರಗಳನ್ನು ಶೇರ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.
#WATCH| Former Congress National Media Coordinator, Radhika Khera joins BJP at the party headquarters in Delhipic.twitter.com/ZnYeVvtFAA
— ANI (@ANI)May 7, 2024

‘ರಾಮನ ಭಕ್ತೆ ಎಂಬ ಕಾರಣಕ್ಕೆ,ರಾಮಲಲ್ಲಾನ ದರ್ಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ, ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಮೋದಿ ಸರ್ಕಾರವು ಮಹಾತ್ಮಾ ಗಾಂಧಿಯವರ ಕಾಂಗ್ರೆಸ್ ಅಲ್ಲ, ಅದು ರಾಮ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್, ”ಎಂದು ಅವರು ಬಿಜೆಪಿಗೆ ಸೇರಿದ ನಂತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2012 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ ಶೇಖರ್ ಸುಮನ್ ರಾಜಕೀಯದಲ್ಲಿ ಇದು ಎರಡನೇ ಅವಧಿಯಾಗಿದೆ. ನಟ 2009 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ವಿರುದ್ಧ ಸ್ಪರ್ಧಿಸಿದ್ದರು.
ಬಿಆರ್‌ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine − one =
Remember me
