ಬೆಂಗಳೂರು:ಕನಸಿನ ರಾಣಿ ಮಾಲಾಶ್ರೀ ಬ್ಯೂಟಿ ಕ್ವೀನ್ ಮಾತ್ರವಲ್ಲದೆ ಆಕ್ಷನ್ ಕ್ವೀನ್ ಆಗಿಯೂ ತೆರೆ ಮೇಲೆ ಮಿಂಚಿದ್ದಾರೆ. ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದ ಮಾಲಾಶ್ರೀ ಅವರ ಪುತ್ರಿ ಕೂಡಾ ಸ್ಯಾಂಡಲ್​ವುಡ್​​ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವುದು ಗೊತ್ತಿರುವ ವಿಚಾರವಾಗಿದೆ. ಆದರೆ ನಟಿಯ ಪುತ್ರಿ ಈಗ ಹೆಸರು ಬದಲಿಸಿಕೊಂಡಿರುವುದು ಸುದ್ದಿಯಾಗಿದೆ.
ರಾಮು ಮತ್ತು ಮಾಲಾಶ್ರೀ ದಂಪತಿ ಪುತ್ರಿಯನ್ನು ಅನನ್ಯ ಮತ್ತು ರಾಧನಾ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಈಗ ಅವರ ಹೆಸರು ಬದಲಾಗಿದೆ. ಮಾಲಾಶ್ರೀ ತಮ್ಮ ಮಗಳಿಗೆ ಆರಾಧನಾ ಎಂದು ಹೆಸರಿಟ್ಟರು. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ, ನಾನು ನಿಮ್ಮ ರಾಧನಾ ರಾಮ! ಇಂದಿನಿಂದ ನನ್ನ ಹೆಸರು ಆರಾಧನಾ ಎಂದು ನಿಮಗೆ ಸುದ್ದಿ ನೀಡಲು ನಾನು ಬಯಸುತ್ತೇನೆ. ಈ ಬದಲಾವಣೆಗಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ನೀಡಬೇಕೆಂದು ನಾನು ಕೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು, ಮತ್ತು ಇದು ಯಾವಾಗಲೂ ನನ್ನೊಂದಿಗೆ ಸದಾ ಇರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದು ಮಾಲಾಶ್ರೀ ಮಗಳು ಇನ್​ಸ್ಟಾಗ್ರಾಮ್​​ನಲ್ಲಿ ಬರೆದಿದ್ದಾರೆ.
A post shared by Aradhanaa / Anannya Ramu (@aradhanaa_r)
ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಖ್ಯಾತ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ತಮ್ಮ ರಾಕ್‌ಲೈನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತರುಣ್ ಸುಧೀರ ನಿರ್ದೇಶಿಸುತ್ತಿದ್ದಾರೆ. ಸಿನಿಮಾಗಳ ಹೊರತಾಗಿ, ಆರಾಧನಾ ಅವರ ಇತ್ತೀಚಿನ ಫೋಟೋಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಕೊನೆಗೂ ಸಿಕ್ಕಿದ್ರು ಜಿಂಗಿ ಚಕ.. ಜಿಂಗಿ ಚಕ..ಕುಚ್​ ಕುಚ್..​ಟುವ್ವಿ ಟುವ್ವಿ..ಗಾಯಕ; ಈ ಹಾಡು ಹಾಡಿದ್ದು ಫೇಮಸ್ ನಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
