ಢಾಕಾ:ಬ್ರೈನ್ ಹ್ಯಾಮ್ರೇಜ್‌ನಿಂದ ಆಸ್ಪತ್ರೆ ದಾಖಲಾಗಿದ್ದ ಮಾಡೆಲ್ ಕಮ್ ನಟಿ ರಿಷ್ತಾ ಲಬೊನಿ ಶಿಮಾನ (39) ನಿಧನರಾಗಿದ್ದಾರೆ. ಕಳೆದ 14 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರಿಷ್ತಾ ಇಂದು ಮೃತಪಟ್ಟಿದ್ದಾರೆ.
ಬಾಂಗ್ಲಾದೇಶದ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ರಿಷ್ತಾ ಬ್ರೈನ್ ಮೇ.21ರಂದು ಬ್ರೈನ್ ಹ್ಯಾಮ್ರೇಜ್ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ನಟಿಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಶೇಕ್ ಮುಜೀಬ್ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಟಿ ಮೃತಪಟ್ಟಿದ್ದಾರೆ. ನಟಿ ಸಾವಿನ ಸುದ್ದಿಯನ್ನು ಸಹೋದರ ಇಜಾಜ್ ಬಿನ್ ಹಾಗೂ ಮಾಜಿ ಪತಿ ಪರ್ವೇಜ್ ಸಜ್ಜದ್ ಖಚಿತಪಡಿಸಿದ್ದಾರೆ.
ಮೇ 20ರ ವರೆಗೆ ಹಲವು ಕಾರ್ಯಕ್ರಮಗಲ್ಲಿ ಪಾಲ್ಗೊಂಡಿದ್ದ ರಿಷ್ತಾ, ಮೇ 21ರ ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಮೇ ಮೊದಲ ವಾರದಲ್ಲಿ ಶೂಟಿಂಗ್‌ನಲ್ಲೂ ಪಾಲ್ಗೊಂಡಿದ್ದರು. ಏಕಾಏಕಿ ಅಸ್ಪಸ್ಥಗೊಂಡ ನಟಿಯನ್ನು ಢಾಕಾದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ತಕ್ಷಣೆ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. ಮೇ 25ರಂದು ನ್ಯೂರೋಸೈನ್ಸ್ ಆಸ್ಪತ್ರೆಗೆ ದಾಖಲಿಸಿ ಮೆದುಳಿನ ಸರ್ಜರಿ ಮಾಡಲಾಗಿತ್ತು. ಮೆದುಳು ಸರ್ಜರಿ ಬಳಿಕ ನಟಿಯ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ಶೇಕ್ ಮುಜೀಬ್ ಮೆಡಿಕಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೇ.29ರಿಂದ ವೆಂಟಿಲೇಟರ್ ನೆರವಿನಲ್ಲಿದ್ದ ನಟಿ ರಿಷ್ತಾ ಇದೀಗ ನಿಧನರಾಗಿದ್ದಾರೆ.
ಬಾಂಗ್ಲಾದ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ರಿಷ್ತಾ 2014ರಲ್ಲಿ ಗಾಯಕ ಪರ್ವೆಜ್ ಸಜ್ಜದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2016ರಲ್ಲಿ ತಾಯಿಯಾಗಿ ಬಡ್ತಿ ಪಡೆದ ನಟಿ ಸಿನಿಮಾದಿಂದ ದೂರ ಉಳಿದಿದ್ದರು. ಆದರೆ ಪರ್ವೆಜ್ ಜೊತೆಗಿನ ವಿಚ್ಚೇದನ ಬಳಿಕ ಮತ್ತೆ ಸಿನಿಮಾಗೆ ಮರಳಿದ್ದರು.
ಮುಖೇಶ್ ಅಂಬಾನಿ, ನೀತಾ ಅಂಬಾನಿಯ ನೆಚ್ಚಿನ ಆಹಾರಗಳು ಯಾವವು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
