ಬೆಂಗಳೂರು:ನಟಿ ತಾಪ್ಸಿ ಪನ್ನು ಬ್ಯಾಡ್ಮಿಂಟನ್​ ಆಟಗಾರ ಮಥಾಯಸ್​ ಬೋ ಜೊತೆ ಕ್ರಿಶ್ಚಿಯನ್​ ಹಾಗೂ ಸಿಖ್​ ಸಂಪ್ರದಾಯದಂತೆ ಅವರು ಮದುವೆ ಆಗಲಿದ್ದಾರೆ.
ಕಳೆದ 10 ವರ್ಷಗಳಿಂದ ತಾಪ್ಸಿ ಪನ್ನು ಮತ್ತು ಮಥಾಯಸ್​ ಬೋ ಪ್ರೀತಿಸುತ್ತಿದ್ದಾರೆ.  ಮಥಾಯಸ್​ ಬೋ ಅವರು ಕ್ರೈಸ್ತ ಧರ್ಮಕ್ಕೆ ಸೇರಿದವರು. ತಾಪ್ಸಿ ಪನ್ನು ಅವರದ್ದು ಸಿಖ್​ ಧರ್ಮ. ಹಾಗಾಗಿ ಅವರಿಬ್ಬರ ಮದುವೆಯನ್ನು ಎರಡೂ ಧರ್ಮದ ಸಂಪ್ರದಾಯದ ಪ್ರಕಾರ ನಡೆಸಲು ನಿರ್ಧರಿಸಲಾಗಿದೆ.

ಕೇವಲ ಕುಟುಂಬದವರ ಸಮ್ಮುಖದಲ್ಲಿ ಮದುವೆ ಆಗಲು ಅವರು ನಿರ್ಧರಿಸಿದ್ದಾರೆ. ಬಾಲಿವುಡ್​ ಮಂದಿಯನ್ನು ಆಹ್ವಾನಿಸಲಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಉದಯಪುರದಲ್ಲಿ ಅವರ ಮದುವೆ ನಡೆಯಲಿದೆ. ಮದುವೆಯ ಬಗ್ಗೆ ತಾಪ್ಸಿ ಪನ್ನು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ.

ತಾಪ್ಸಿ ಪನ್ನು ಅವರಿಗೆ ಈಗ 36 ವರ್ಷ ವಯಸ್ಸು. 2010ರಿಂದಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
