ಲಖನೌ:ಯುವಕನೋರ್ವ ಮೊಬೈಲ್​ನಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿ ಅಪ್ರಾಪ್ತ ವಯಸ್ಕ ಸಹೋದರಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಕಸ್​ಗಂಜ್​ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಸಂಜು (19) ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಸ್​ಗಂಜ್​ ವಿಭಾಗದ ಪಟಿಯಾಲಿ ಕೊತ್ವಾಲಿ ಪೊಲೀಸ್​ ಠಾಣಾಧಿಕಾರಿ ಗೋವಿಂದ್ ಬಲ್ಲಭ್ ಶರ್ಮಾ, ಫೆಬ್ರವರಿ 03ರಂದು ಘಟನೆ ನಡೆದಿದ್ದು, ಆರೋಪಿಯನ್ನು ಸೋಮವಾರ ತಡರಾತ್ರಿ ಬಂಧಿಸಲಾಗಿದೆ. ಆರೋಪಿ ಸಂಜು ತಂದೆ ವರ್ಷದ ಹಿಂದೆ ತೀರಿಕೊಂಡಿದ್ದು, ಆತ ತನ್ನ ತಾಯಿ ಹಾಗೂ ತಂಗಿಯೊಂದಿಗೆ ಜೀವನ ನಡೆಸುತ್ತಿದ್ದ.
UP : जिला कासगंज में 19 वर्षीय संजू ने मोबाइल पर पोर्न मूवी देखकर छोटी बहन से रेप किया। पकड़े जाने के डर से बहन को गला दबाकर मार डाला। आरोपी अरेस्ट है।pic.twitter.com/hDTlBnCG1m
ಇದನ್ನೂ ಓದಿ:ಸಹ ಆಟಗಾರನಿಗೆ ಮಧ್ಯದ ಬೆರಳು ತೋರಿಸಿದ ಕೇನ್​ ವಿಲಿಯಮ್ಸನ್; ವಿಡಿಯೋ ವೈರಲ್​ ​
ಫೆಬ್ರವರಿ 3 ರಂದು ರಾತ್ರಿ ತನ್ನ ತಾಯಿ ತನ್ನ ಚಿಕ್ಕಪ್ಪನ ಮನೆಗೆ ಹೋದಾಗ, ಸಂಜು ತನ್ನ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿದ್ದಾನೆ. ಇದಾದ ಬಳಿಕ ಮನೆಯಲ್ಲಿ ಯಾರು ಇಲ್ಲ ಎಂಬುದನ್ನು ತಿಳಿದುಕೊಂಡ ಆರೋಪಿ ಅಪ್ರಾಪ್ತ ವಯಸ್ಕ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ನಂತರ ಆಕೆಯ ಬಾಯಿ ಮುಚ್ಚಲು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಸಂತ್ರಸ್ತೆಯ ತಾಯಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಅವರು ದಾಖಲಿಸಿದ ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಕಸ್​ಗಂಜ್​ ವಿಭಾಗದ ಪಟಿಯಾಲಿ ಕೊತ್ವಾಲಿ ಪೊಲೀಸ್​ ಠಾಣಾಧಿಕಾರಿ ಗೋವಿಂದ್ ಬಲ್ಲಭ್ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + two =
Remember me
