ನವದೆಹಲಿ:ದೇಶದಲ್ಲಿ ಲೋಕಸಭೆ-ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಲುವಾಗಿ ಕೇಂದ್ರ ಸರ್ಕಾರ ತರಲು ಉದ್ದೇಶಿಸಿರುವ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆಗೆ ಆರಂಭದಲ್ಲಿ ವಿಘ್ನ ಎಂಬಂಥ ಪರಿಸ್ಥಿತಿ ಎದುರಾಗಿದೆ.
ಒಂದು ದೇಶ, ಒಂದು ಚುನಾವಣೆ ವಿಚಾರವಾಗಿ ಸಾಧಕ-ಬಾಧಕಗಳನ್ನು ಅರಿಯಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿ, ನಿನ್ನೆ ಅದಕ್ಕೆ 7 ಸದಸ್ಯರನ್ನೂ ಆಯ್ಕೆ ಮಾಡಿತ್ತು. ಆದರೆ ಆ ಸಮಿತಿ ಸದಸ್ಯರಲ್ಲಿ ಒಬ್ಬರಾಗಿರುವ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸದಸ್ಯರಾಗಲು ನಿರಾಕರಿಸಿದ್ದಾರೆ.
ಇದನ್ನೂ ಓದಿ:ಒಂದು ದೇಶ, ಒಂದು ಚುನಾವಣೆ: ಕೇಂದ್ರ ಸರ್ಕಾರದಿಂದ ಇಂದು ಮಹತ್ವದ ಹೆಜ್ಜೆ!
ಅಧೀರ್ ರಂಜನ್ ಒಂದು ದೇಶ ಒಂದು ಚುನಾವಣೆ ಕುರಿತ ಸಮಿತಿಯನ್ನು ಸೇರುತ್ತಿಲ್ಲ ಎಂದು ಕಾಂಗ್ರೆಸ್​ ಸಂಸದ ಕೆ.ಸಿ.ವೇಣುಗೋಪಾಲ ಖಚಿತಪಡಿಸಿದ್ದಾರೆ. ಭಾರತ ಸರ್ಕಾರ ಅದಾನಿ ವಿಷಯವನ್ನು ಬೇರೆಡೆಗೆ ತಿರುಗಿಸಲು ಬಯಸಿದ್ದು, ಅದಕ್ಕಾಗಿಯೇ ಅವರು ಈ ಎಲ್ಲ ಕೆಲಸಗಳನ್ನು ಮಾಡುತ್ತಿದ್ದಾರೆ. ಅಲ್ಲದೆ ಈ ಕೆಲಸಗಳನ್ನು ಮಾಡುವಾಗ ಅವರು ಸಂಸದೀಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಸಂಪೂರ್ಣವಾಗಿ ಹಾಳುಮಾಡುತ್ತಿದ್ದಾರೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
ಇದನ್ನೂ ಓದಿ:ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕಾಶ್ ರಾಜ್, ನೆಟ್ಟಿಗರಿಂದ ಫುಲ್ ಟ್ರೋಲ್
ದೇಶದ ಅತಿದೊಡ್ಡ ವಿರೋಧ ಪಕ್ಷದಿಂದ ಒಬ್ಬ ಸದಸ್ಯನನ್ನಷ್ಟೇ ಸಮಿತಿಗೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಚಿದಂಬರಂ ನಿನ್ನೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಅಬ್ಬಬ್ಬಾ.. ಇದೇನಿದು ‘ಸರ್ಪ’ರೈಸ್!: ದೇವರಕೋಣೆಯಲ್ಲಿ ಕಾಳಿಂಗ ಸರ್ಪ, ಸ್ಕೂಲ್​ಬ್ಯಾಗ್​ನಲ್ಲಿ ನಾಗರಹಾವು!

ಬಸ್​ನಲ್ಲಿನ ಚಿಲ್ಲರೆ ಸಮಸ್ಯೆಗೆ ಕಂಡಕ್ಟರ್ ಕೊರಳಲ್ಲೇ ಪರಿಹಾರ!; ಅಂತೂ ಜಾರಿಗೆ ಬಂತು ಹಳೇ ಬೇಡಿಕೆ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − two =
Remember me
