ದೆಹಲಿ:ಪ್ರಭಾಸ್ ಮತ್ತು ಕೃತಿ ಸನೂನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಆದಿಪುರುಷ್​’ ಚಿತ್ರದ ಟ್ರೈಲರ್​ ಇತ್ತೀಚಿಗಷ್ಟೆ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಈ ನಡುವೆ ಚಿತ್ರ ಬಿಡುಗಡೆಗೆ ಮುನ್ನವೇ ಮತ್ತೊಂದು ವಿವಾದಕ್ಕೆ ಸಿಲುಕಿದೆಯಾ ಎಂಬ ಪ್ರಶ್ನೆ ಹುಟ್ಟು ಹಾಕಿದೆ.
ಇದನ್ನೂ ಓದಿ:ನಟಿಯ ಭಾವಚಿತ್ರವಿರುವ ಶ್ರದ್ಧಾಂಜಲಿ ಪೋಸ್ಟರ್ ವೈರಲ್:​ ಅಭಿಮಾನಿಗಳು ಶಾಕ್​
ಸಂಜಯ್ ದೀನನಾಥ್ ತಿವಾರಿ ಎಂಬುವರು ಬಾಂಬೆ ಹೈಕೋರ್ಟ್​ನ CBFC ಮಂಡಳಿಯ ಮುಂದೆ ಚಿತ್ರದ ವಿರುದ್ಧ ದೂರು ದಾಖಲಿಸಿದ್ದಾರೆ. ಬಿಡುಗಡೆ ಮಾಡಲಾದ ಪೋಸ್ಟರ್‌ನಲ್ಲಿ ಚಲನಚಿತ್ರ ನಿರ್ಮಾಪಕ ಮತ್ತು ಕಲಾವಿದರು ಗಂಭೀರ ಎನಿಸುವಂತಹ ತಪ್ಪುಗಳನ್ನು ಎಸಗಿದ್ದಾರೆ. ಆದ್ದರಿಂದ ಇಂತಹ ಗಂಭೀರ ತಪ್ಪುಗಳು ಆದಿಪುರುಷ ಚಿತ್ರದಲ್ಲಿ ಮತ್ತೆ ಸಂಭವಿಸುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಅದು ನಿಜವಾಗಿದ್ದರೆ, ಭವಿಷ್ಯದಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಬಲವಾದ ಸಾಧ್ಯತೆಯಿದೆ. ಅಲ್ಲದೆ ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಹುದು ಎಂದು ದೂರಿನಿಲ್ಲಿ ಉಲ್ಲೇಖಿಸಿದ್ದಾರೆ. ಬಹುನಿರೀಕ್ಷಿತ ಈ ಚಿತ್ರವು ಜೂನ್ 16ರಂದು ಬಿಡುಗಡೆಯಾಗಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + nineteen =
Remember me
