ಮುಂಬೈ:ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ ಪ್ರತಿನಿತ್ಯ ಏರುತ್ತಲೇ ಸಾಗಿದೆ. ಅನೇಕ ವಿರೋಧ ಪಕ್ಷಗಳು ಈ ಬಗ್ಗೆ ಈಗಾಗಲೇ ಹೋರಾಟಗಳನ್ನೂ ಆರಂಭಿಸಿವೆ. ಆದರೆ ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಅವರ ಶಿವಸೇನೆ ವತಿಯಿಂದ ಕೇಂದ್ರ ಸರ್ಕಾರಕ್ಕೆ ವಿಶೇಷ ರೀತಿಯಲ್ಲಿ ಸೆಡ್ಡು ಹೊಡೆಯಲಾಗಿದೆ. ಪೆಟ್ರೋಲ್​ ಬೆಲೆ ಲೀಟರ್​ಗೆ 100 ದಾಟಿದ್ದರೂ ಉದ್ಧವ್​ ಠಾಕ್ರೆ ಜನ್ಮದಿನ ಪ್ರಯುಕ್ತ ಕೇವಲ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಲಾಗಿದೆ.
ಮಹಾರಾಷ್ಟ್ರದ ಡೊಂಬಿವಲಿ ಯುವ ಸೇನೆ ಈ ರೀತಿ ವಿಶೇಷ ಪ್ರಯತ್ನ ಮಾಡಿದೆ. ಅಲ್ಲಿನ ಉಸ್ಮಾ ಪೆಟ್ರೋಲ್​ ಬಂಕ್​ನಲ್ಲಿ ಭಾನುವಾರ ಬೆಳಗ್ಗೆಯಿಂದ ಕೇವಲ ಒಂದು ರೂಪಾಯಿಗೆ 1 ಲೀಟರ್​ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಮುಂಬೈನಲ್ಲಿ ಪೆಟ್ರೋಲ್​ ದರ 102 ರೂಪಾಯಿ ತಲುಪಿರುವಾಗ ಇಷ್ಟೊಂದು ಕಡಿಮೆ ಬೆಲೆಗೆ ಪೆಟ್ರೋಲ್​ ಸಿಗುತ್ತಿರುವ ವಿಚಾರ ತಿಳಿದ ಜನರು ಬೆಳಗ್ಗೆಯಿಂದಲೂ ಕ್ಯೂ ನಿಂತು ಪೆಟ್ರೋಲ್ ಹಾಕಿಸಿಕೊಂಡು ಹೋಗಿದ್ದಾರೆ. ಬೆಳಗ್ಗೆ 10ರಿಂದ 12 ಗಂಟೆಯವರೆಗೆ ಈ ರೀತಿ 1 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್ ಮಾರಾಟ ಮಾಡಿರುವುದಾಗಿ ತಿಳಿಸಲಾಗಿದೆ.
ಅದೇ ರೀತಿ ಅಂಬರನಾಥ ಪ್ರದೇಶದ ವಿಮ್ಕೊ ನಾಕಾ ಬಳಿಯ ಪೆಟ್ರೋಲ್ ಪಂಪ್​ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ 50 ರೂಪಾಯಿಗೆ ಒಂದು ಲೀಟರ್ ಪೆಟ್ರೋಲ್​ನಂತೆ ಮಾರಾಟ ಮಾಡಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್)
ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − 1 =
Remember me
