ನವದೆಹಲಿ:ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರಿಗೆ ತಿಹಾರ್ ಜೈಲಿನಿಂದ ಹೊರಬರುವ ದಾರಿ ಕಾಣುತ್ತಿಲ್ಲ. ಈಗಾಗಲೇ ಹಲವು ಬಾರಿ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ರೂಸ್ ಅವೆನ್ಯೂ ನ್ಯಾಯಾಲಯ, ಡೀಫಾಲ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ(ಆ.7)ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ:ಸೆನ್ಸೆಕ್ಸ್ ಭಾರಿ ಕುಸಿತ- ಷೇರು ಹೂಡಿಕೆದಾರರಿಗೆ 10 ಲಕ್ಷ ಕೋಟಿ ರೂ. ನಷ್ಟ!
ನ್ಯಾಯಾಧೀಶೆ ಕಾವೇರಿ ಭವೇಜಾ ಅರ್ಜಿಯ ವಿಚಾರಣೆ ನಡೆಸಿದ್ದು, ಹಿರಿಯವಕೀಲರು ಬಾರದ ಕಾರಣ ಪ್ರಕರಣವನ್ನು ಮುಂದೂಡುವಂತೆ ಕವಿತಾ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದರಿಂದ ವಿಚಾರಣೆಯನ್ನು ಮುಂದೂಡಿದರು.
ಕವಿತಾರನ್ನು 2024ರ ಮಾರ್ಚ್ 15 ರಂದು ಇಡಿ ಮತ್ತು ನಂತರ ಏಪ್ರಿಲ್ 11 ರಂದು ಸಿಬಿಐ ಬಂಧಿಸಿತ್ತು. ಇದಕ್ಕೂ ಮುನ್ನ ಇಡಿ ಮತ್ತು ಸಿಬಿಐ ಸಲ್ಲಿಸಿದ್ದ ಎರಡೂ ಪ್ರಕರಣಗಳಲ್ಲಿ ಸಾಮಾನ್ಯ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ನಿರಾಶೆಯಾಯಿತು. ಈ ಹಿನ್ನೆಲೆಯಲ್ಲಿ ಮತ್ತೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
ಸೈಬರ್ ವಂಚಕರಿಂದ ಮುಂಬೈನವರು ಕಳೆದುಕೊಂಡಿದ್ದು ಬರೋಬ್ಬರಿ 650 ಕೋಟಿ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:14 − thirteen =
Remember me
