ನವದೆಹಲಿ:ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಲ್ಕರ್​(26) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಿ ಅಫ್ತಾಬ್​ ಹೊಸ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ಧಾನೆ.
ವಿಚಾರಣೆ ವೇಳೆ ಆರೋಪಿ ಪ್ರಿಯಕರ ಅಫ್ತಾಬ್​ ಪೂನಾವಾಲಾ ಕೊಲೆ ಆರೋಪವನ್ನು ನಿರಾಕರಿಸಿದ್ದು ವಿಚಾರಣೆ ಎದುರಿಸಲು ಸಿದ್ದನಿರುವುದಾಗಿ ನ್ಯಾಯಾಲಯದ ಮುಂದೆ ಹೇಳಿದ್ದಾನೆ.
ಶ್ರದ್ಧಾ ವಾಲ್ಕರ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರಿಯಕರ ಅಫ್ತಾಬ್ ಪೂನಾವಾಲಾ ತನಗೂ ಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದಾನೆ.
ದೆಹಲಿಯ ಸಾಕೇತ್​ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠದ ಮುಂದೆ ಮಾತನಾಡಿದ ಆರೋಪಿ ಅಫ್ತಾಬ್​ ತಾನು ಹತ್ಯೆ ಮಾಡಿಲ್ಲ ವಿಚಾರಣೆ ಎದುರಿಸಲು ಸಿದ್ದನಿದ್ದೇನೆ ಎಂದು ನ್ಯಾಯಾಪೀಠ ಮುಂದೆ ವಿವರಿಸಿದ್ದಾನೆ.
ಇದನ್ನೂ ಓದಿ:ಕೇರಳ ಟೂರಿಸ್ಟ್​ ಬೋಟ್​ ದುರಂತ; 22 ಮಂದಿ ಮೃತ್ಯು, ಹಲವರು ನಾಪತ್ತೆ
ಪ್ರಕರಣವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿ ಶ್ರದ್ಧಾ ತಂದೆ ವಿಕಾಸ್​ ವಾಲ್ಕರ್​ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಪ್ರಕರಣ ಇತ್ಯರ್ಥಗೊಂಡಲ್ಲಿ ಮಗಳ ಅಂತ್ಯಕ್ರಿಯೆಯನ್ನು ಮಾಡಬಹುದು ಹಾಗೂ ವಿಧಿವಿಧಾನಗಳನ್ನು ನೆರವೇರಿಸಬಹುದು. ಪ್ರಕರಣದ ವಿಚಾರಣೆಯನ್ನು ಇನ್ನೊಂದು ತಿಂಗಳಲ್ಲಿ ಮುಗಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ನ್ಯಾಯಾಲಯಕ್ಕೆ ಹೇಳಿದ್ದರು.
ಹತ್ಯೆ ಪ್ರಕರಣದ ವಿಚಾರವಾಗಿ ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನ್ಯಾಯಾಪೀಠವು ಆರೋಪಿ ಪ್ರಿಯಕರನ ವಿರುದ್ಧ ಭಾರತ ದಂಡ ಸಂಹಿತೆ(IPC Section) 302(ಕೊಲೆ), 201(ಸಾಕ್ಷ್ಯ ನಾಶ) ಅಡಿ ಪ್ರಕರಣ ದಾಖಲಿಸಿದೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್​ 1ಕ್ಕೆ ನಡೆಸಲಾಗುವುದು ಎಂದು ಹೇಳಿ ನ್ಯಾಯಾಲಯ ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 2 =
Remember me
