ಹೈದರಾಬಾದ್​​:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮದಿಂದಾಗಿ ತೆಲಂಗಾಣ ಮತ್ತು ಆಂಧ್ರದಲ್ಲಿ ಭಾರೀ ಮಳೆಯಾಗುತ್ತಿರುವುದು ಗೊತ್ತೆ ಇದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಹೈದರಾಬಾದ್‌ನಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಇದನ್ನು ಓದಿ:ಮಾಲಿವುಡ್​ನಲ್ಲಿ #Metoo; ಮೌನ ಮುರಿದ ಮೆಗಾಸ್ಟಾರ್​​ ಮೊದಲ ರಿಯಾಕ್ಷನ್​​​ ಹೀಗಿದೆ..
ಈ ಬಗ್ಗೆ ಟಾಲಿವುಡ್​​ ಮೆಗಾಸ್ಟಾರ್​ ಚಿರಂಜೀವಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ತೆಲುಗು ರಾಜ್ಯಗಳಲ್ಲಿ ಪ್ರವಾಹದ ಪರಿಣಾಮ ತುಂಬಾ ಹೆಚ್ಚಾಗಿದೆ. ಹಲವು ಗ್ರಾಮಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಜಲಾವೃತವಾಗಿವೆ. ಇಂತಹ ಸಮಯದಲ್ಲಿ ಎಲ್ಲರೂ ಜಾಗರೂಕರಾಗಿರಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​​ನಲ್ಲಿ ತಿಳಿಸಿದ್ದಾರೆ.
ನಿಮ್ಮ ಕುಟುಂಬ ಸದಸ್ಯನಾಗಿ ನನ್ನದೊಂದು ಮನವಿ. ಏನಾದರೂ ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗಡೆ ಬನ್ನಿ.ಇಲ್ಲದಿದ್ದರ ಮನೆಯಿಂದ ಹೊರಗೆ ಬರಬೇಡಿ. ವೈರಲ್​ ಜ್ವರದ ಅಪಾಯವಿರುವುದರಿಂದ ಮಕ್ಕಳು ಸೇರಿದಂತೆ ಎಲ್ಲರೂ ಜಾಗರೂಕರಾಗಿರಬೇಕು. ಇಂತಹ ಅನಾಹುತಗಳು ಎದುರಾದಾಗ ನನ್ನ ಅಭಿಮಾನಿಗಳು ಸದಾ ಬೆಂಬಲ್ಕೆ ಇರುತ್ತಾರೆ. ಈಗಲೂ ಅಭಿಮಾನಿಗಳು ಬೆಂಬಲಕ್ಕೆ ನಿಲ್ಲುತ್ತಾರೆ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
తెలుగు రాష్ట్రాల్లో వరద ప్రభావం చాలా ఎక్కువగా ఉంది. పలు గ్రామాలు, జాతీయ రహదారులు నీటితో మునిగిపోయాయి. ఇటువంటి పరిస్థితుల్లో ప్రజలు అప్రమత్తంగా ఉండాలి.మీ కుటుంబ సభ్యుడిగా నా మనవి ఒక్కటే… అత్యవసరం అయితే తప్ప ఎవరు ఇంటి నుంచి బయటకు రావద్దు. వైరల్ ఫీవర్ వంటివి వచ్చే ప్రమాదం ఉండటం…
ಸೈಕ್ಲೋನ್​​ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ 9 ಜೆಲ್ಲಗಳಲ್ಲಿ ರೆಡ್​ ಅಲರ್ಟ್​​, ಹದಿಮೂರು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​​ ಹಾಗೂ ಹನ್ನೊಂದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ. ಅಲ್ಲದೆ ಕರಾವಳಿಯಲ್ಲಿರುವವರು ಜಾಗೂರಕರಾಗಿರುವಂತೆ ಸೂಚಿಸಿದೆ. ಪ್ರಸ್ತುತ ಹೈದರಾಬಾದ್​ ಮತ್ತು ವಿಜಯವಾಡದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡಗಳು ಬೀಡುಬಿಟ್ಟಿವೆ. ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣದಿಂದಲೇ ತಮ್ಮ ಕಾರ್ಯವನ್ನು ಆರಂಭಿಸುತ್ತಾರೆ. ರಾಜ್ಯದ ಪ್ರತಿ ಜಿಲ್ಲಾಧಿಕಾರಿಗಳ ಕಚೇರಿ, ಹೈದರಾಬಾದ್​ ಮುನ್ಸಿಪ್​ ಕಾರ್ಪೊರೇಷನ್​​​(ಜಿಎಚ್​​ಎಂಸಿ) ಮತ್ತು ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಸರ್ಕಾರ ಸೂಚನೆ ನೀಡಿದೆ. (ಏಜೆನ್ಸೀಸ್​)
ಹೆಲ್ಮೆಟ್​ ಬಳಸಿಲ್ಲವೆಂದು ಕಾರು ಮಾಲೀಕನಿಗೆ ದಂಡ; ಚಲನ್​ ನೋಡಿ ಓನರ್​ಗೆ ಶಾಕ್​.. ಮುಂದೇನಾಯ್ತು ಗೊತ್ತಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
