ನವದೆಹಲಿ:ಕರೊನಾ ವೈರಸ್‌ನಿಂದ ಈಗಿರುವ ಲಾಕ್‌ಡೌನ್‌ ಅವಧಿಯನ್ನು ಒಂದೊಂದೇ ರಾಜ್ಯಗಳು ವಿಸ್ತರಣೆ ಮಾಡುತ್ತಿವೆ. ಒಡಿಶಾ ಈ ಅವಧಿಯನ್ನು ಏಪ್ರಿಲ್‌ 30ರವರೆಗೆ ಮುಂದುವರೆಸಿದ ಬೆನ್ನಲ್ಲೇ ಈಗ ಪಂಜಾಬ್‌ ಈ ಅವಧಿಯನ್ನು ಮೇ 1ರ ವರೆಗೆ ವಿಸ್ತರಿಸಿದೆ.
ಈ ಹಿಂದೆ ರೈತರಿಗಾಗಿ ಜಿಲ್ಲಾವಾರು ಲಾಕ್‌ಡೌನ್ ಸಡಿಲಿಕೆಯನ್ನು ಸರ್ಕಾರ ಮಾಡಿತ್ತು, ಇದೀಗ ಅವಧಿಯನ್ನು ವಿಸ್ತರಣೆ ಮಾಡಿರುವುದಾಗಿ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್ ಇಂದು ಹೇಳಿದ್ದಾರೆ.
ಲಾಕ್ ಡೌನ್ ಮುಂದುವರಿಸುವಂತೆ ಇಂದು ನಡೆದ ಪಂಜಾಬ್ ಸಚಿವ ಸಂಪುಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೀಗಾಗಿ ಇಂದಿನಿಂದ ಮತ್ತೆ 21 ದಿನಗಳ ಕಾಲ ಲಾಕ್​ಡೌನ್​ ಮುಂದುವರೆಯಲಿದೆ. ಪಂಜಾಬ್‌ನಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ, ನವದೆಹಲಿ ಹಾಗೂ ಹರಿಯಾಣದಲ್ಲಿ ಆಗುತ್ತಿರುವ ಬದಲಾವಣೆಗಳೂ ನಮ್ಮ ರಾಜ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದಿದ್ದಾರೆ.
ಪಂಜಾಬ್‌ನಲ್ಲಿ ಇದುವರೆಗೂ ಒಟ್ಟು 132 ಜನರಿಗೆ ಕರೊನಾ ಸೋಂಕು ತಗುಲಿದ್ದು, ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ.(ಏಜೆನ್ಸೀಸ್‌)
ಸಂಕಷ್ಟದ ಪರಿಸ್ಥಿತಿ ನಿಭಾಯಿಸುವಲ್ಲಿ ಮಹಿಳೆಯರದ್ದೇ ಎತ್ತಿದ ಕೈ, ಕರೊನಾ ವಿಷಯದಲ್ಲೂ ಇದು ಸಾಬೀತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + seven =
Remember me
