ಶಹರಾನ್​​ಪುರ:ಶುಕ್ರವಾರ ನಡೆದಿದ್ದ ಗಲಭೆಯಲ್ಲಿ ಭಾಗಿಯಾಗಿದ್ದ ಗಲಭೆಕೋರರನ್ನು ಗುರಿತಿಸಿದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಒಂದು ಹೆಜ್ಜೆ ಮುಂದೆ ಹೋಗಿ ಗಲಭೆಕೋರರ ಮನೆಯನ್ನು ಧ್ವಂಸಗೊಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗಲಭೆಯಲ್ಲಿ ಭಾಗಿಯಾಗಿದ್ದವರನ್ನು ಹಾಗೂ ಅವರ ಮನೆಯ ವಿಳಾಸವನ್ನು ಪತ್ತೆ ಹಚ್ಚಿದ ಪೊಲೀಸರು ಎರಡು ನಗರಗಳಲ್ಲಿನ ಕೆಲ ಗಲಭೆಕೋರರ ಮನೆಗಳನ್ನು ಜೆಸಿಬಿ ತಂದು ಉರುಳಿಸಿದೆ. ಈ ಮೂಲಕ ಹಿಂಸಾಚಾರಕ್ಕೆ ಕಾರಣರಾದವರಿಗೆ ಈ ರೀತಿ ಪಾಠ ಕಲಿಸುತ್ತಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ದ ಬಿಜೆಪಿ ವಕ್ತಾರೆ ನೂಪುರ್​ ಶರ್ಮಾ ಹೇಳಿಕೆಯನ್ನು ಖಂಡಿಸಿ, ಶುಕ್ರವಾರ ಕೈಗೊಂಡಿದ್ದ ಪ್ರತಿಭಟನೆ ನೋಡ ನೋಡುತ್ತಿದ್ದಂತೆ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರನ್ನು ಬಿಡದೇ ಕಲ್ಲು ತೂರಾಟ ನಡೆಸಲಾಗಿತ್ತು. ಇದೀಗ ಹತೋಟಿಗೆ ಬಂದಿದ್ದು, ಇಲ್ಲಿನ ಸರ್ಕಾರ ಕ್ರಮಕ್ಕೆ ಮುಂದಾಗಿದೆ.
ಈ ಪೈಕಿ 68 ಮಂದಿಯನ್ನು ಬಂಧಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನೇ ಪ್ರಮುಖವಾಗಿರಿಸಿಕೊಂಡಿರುವ ಪೊಲೀಸರು ಒಬ್ಬೊಬ್ಬರಿಗೆ ಪಾಠ ಕಲಿಸುತ್ತಿದ್ದಾರೆ.(ಏಜೆನ್ಸೀಸ್​)
ಕಲ್ಲು ತೂರಾಟ ನಡೆಸಿದ 68 ಮಂದಿ ಗಲಭೆಕೋರರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + ten =
Remember me
