ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ಕುರಿತು ಅವಹೇಳನಕಾರಿ ಆಗಿ ಮಾತನಾಡಿದ ಬಳಿಕ, ಅದನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದ ನಟ ಪ್ರಕಾಶ್ ರಾಜ್, ಇದೀಗ ಇನ್ನೊಮ್ಮೆ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದಾರೆ.
ಇಂದು ಪತ್ರಿಕೆಯೊಂದರ ಸುದ್ದಿಯ ತುಣುಕನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ ಪ್ರಕಾಶ್ ರಾಜ್, ಇದು ಹೃದಯಹಿಂಡುವಂಥ ಘಟನೆ. ಇದು ಅಸಹ್ಯಕರ ಎಂದಿರುವ ಅವರು, ತ(ಸ)ನಾತನಿ ಮನಸ್ಥಿತಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯ ರಂಗಮಂದಿರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ಪ್ರಕಾಶ್ ರಾಜ್, ರಾಜಕಾರಣಿಗಳು ಏನು ಧರ್ಮವನ್ನು ಗುತ್ತಿಗೆ ಪಡೆದಿದ್ದಾರಾ ಎಂದು ಪ್ರಶ್ನಿಸಿದ್ದರು. ಅಲ್ಲದೆ, ಸನಾತನ ಧರ್ಮ ನಿರ್ಮೂಲಮನೆ ಕುರಿತು ಹೇಳಿಕೆ ನೀಡಿ ತೀವ್ರ ವಿವಾದಕ್ಕೀಡಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ ಎಂದೂ ಪ್ರಶ್ನೆ ಮಾಡಿದ್ದರು. ಇದೀಗ ಇನ್ನೊಮ್ಮೆ ಸನಾತನ ಧರ್ಮದ ವಿಚಾರವಾಗಿ ಪ್ರಕಾಶ್ ರಾಜ್ ಮಾತನಾಡಿದ್ದಾರೆ.
Heart wrenching .. This…This.. disgusting#Tanathanimind set has to be eradicated completely..#justaskingpic.twitter.com/9qJA2ebFmB
— Prakash Raj (@prakashraaj)September 28, 2023

ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್​ ರಾಜ್​

ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತ ಸೀಮಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 8 =
Remember me
