
ಬೆಂಗಳೂರು:ಕಳೆದೆರಡು ದಿನಗಳಿಂದ ಇಳಿಮುಖವಾಗುವ ಕೊಂಚ ಲಕ್ಷಣ ತೋರಿದ್ದ ಕರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಹೊಸ ದಾಖಲೆಯನ್ನೇ ಬರೆದಿದೆ. ರಾಜ್ಯಾದ್ಯಂತ ಹೊಸದಾಗಿ ಪತ್ತೆಯಾದ ಕೋವಿಡ್​ ರೋಗಿಗಳು ಮತ್ತೆ ಆತಂಕ ಮೂಡಿಸಿದ್ದಾರೆ.
ಕಳೆದ 24 ತಾಸುಗಳಲ್ಲಿ 4,764 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನದಲ್ಲಿ ಕಂಡುಬಂದ ಅತಿ ಹೆಚ್ಚು ಪ್ರಕರಣಗಳ ಸಂಖ್ಯೆ ಇದಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಪ್ರಮಾಣ 75,833ಕ್ಕೆ ತಲುಪಿದೆ.
ಸದ್ಯ ಸಕ್ರಿಯ ರೋಗಿಗಳ ಸಂಖ್ಯೆ 47,069ಕ್ಕೆ ಏರಿದೆ. ಸಮಾಧಾನದ ಸಂಗತಿ ಎಂದರೆ, ಕಳೆದ ಕೆಲ ದಿನಗಳಿಂದ ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತಿದೆ. ಕಳೆದೆರಡು ದಿನಗಳಿಂದ ಸೋಮವಾರ 72, ಮಂಗಳವಾರ 61 ಆಗಿದ್ದ ಸಾವಿನ ಸಂಖ್ಯೆ ಇಂದು 55ಕ್ಕೆ ಇಳಿದಿದೆ. ರಾಜ್ಯದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 1,519.
ಇದನ್ನೂ ಓದಿ;ರಾಜ್ಯದಲ್ಲಿ ಜು.22 ಕೋವಿಡ್​ ಅಂಕಿ- ಸಂಖ್ಯೆ
ಕಳೆದ 24 ತಾಸುಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವವರ ಸಂಖ್ಯೆ ಹೆಚ್ಚಾಗಿರುವುದು ಸಮಾಧಾನದ ಸಂಗತಿಯಾಗಿದೆ. ನಿನ್ನೆ 1,664 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದರೆ, ಇಂದು 1,780 ಜನರು ಗುಣಮುಖರಾಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು ಚೇತರಿಕೆ ಕಂಡವರು 27,239 ಮಂದಿ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 47,069.
ರಾಜಧಾನಿಯಲ್ಲಿ ಇಂದು ಸೋಂಕಿತರ ಸಂಖ್ಯೆ ನಿನ್ನೆಗೆ ಹೋಲಿಸಿದಲ್ಲಿ ಹೆಚ್ಚಾಗಿದೆ. ನಿನ್ನೆ 1,714 ಆಗಿದ್ದ ಸಂಖ್ಯೆ ಇಂದು 2,050ಕ್ಕೆ ಏರಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 36,993ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳು 27,969.
ಇದನ್ನೂ ಓದಿ;ಆಕ್ಸ್​ಫರ್ಡ್​ ಕರೊನಾ ಲಸಿಕೆ ಯಶಸ್ವಿಯಾದರೆ ಭಾರತಕ್ಕೇನು ಲಾಭ? ಎಲ್ಲಿ ಉತ್ಪಾದನೆಯಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿಯೂ ಕೂಡ ಸಾವಿನ ಪ್ರಮಾಣ ಇಳಿಕೆಯಾಗಿದೆ. ಸೋಮವಾರ 31, ಮಂಗಳವಾರ 22ಕ್ಕೆ ಇಳಿದಿದ್ದರೆ. ಇಂದು ಇದು 15 ಆಗಿದೆ. ಒಟ್ಟಾರೆ ಸಾವಿನ ಪ್ರಕರಣಗಳು 735.
ಜಿಲ್ಲಾವಾರು ಕೋವಿಡ್​ ಪ್ರಕರಣಗಳ ಅಂಕಿ-ಸಂಖ್ಯೆ

ಕರೊನಾ ಲಸಿಕೆ ತಯಾರಿಗೆ ಪೈಪೋಟಿ; ಕ್ಲಿನಿಕಲ್​ ಟ್ರಯಲ್​ಗೆ ಒಪ್ಪಿಕೊಂಡರೆ ಸಿಗುವ ಹಣವೆಷ್ಟು…?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
