ಆಗ್ರಾ:ಉತ್ತರ ಪ್ರದೇಶದ ಇಟಾವಾದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟು, 40ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯ್​ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ನಾಲ್ವರು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 40ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಎಸ್‌ಎಸ್‌ಪಿ ಸಂಜಯ್​ ಕುಮಾರ್​ ಶರ್ಮಾ, ಆಗ್ರಾದಿಂದ ಲಕ್ನೋಗೆ ತೆರಳುತ್ತಿದ್ದ ಕಾರೊಂದು ರಸ್ತೆಯ ಮಧ್ಯಭಾಗದಲ್ಲಿರುವ ನೆಟ್ ಡಿವೈಡರ್ ಅನ್ನು ದಾಟಿ ರಾಂಗ್ ಸೈಡ್‌ನಲ್ಲಿ ಬಂದಿದೆ. ಎದುರು ಬಂದ ಸ್ಲೀಪರ್ ಬಸ್​ಗೆ ಕಾರು ಡಿಕ್ಕಿ ಹೊಡೆದಿದ್ದು, ಬಸ್ ಎಕ್ಸ್‌ಪ್ರೆಸ್‌ವೇಯಿಂದ 20 ಅಡಿ ಕೆಳಗೆ ಬಿದ್ದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
#WATCH| Etawah, Uttar Pradesh: 7 killed in a collision between a double-decker bus and car on Agra Lucknow ExpresswaySSP Etawah Sanjay Kumar Verma says, "A double-decker bus going from Raebareli to Delhi collided with a car at around 12:30 am. There were 60 people on the bus,…pic.twitter.com/LcuMLYDLpN
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + nineteen =
Remember me
