ನವದೆಹಲಿ:ನಮಸ್ತೆ ಟ್ರಂಪ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್​ ಜಗತ್ತಿನ ಅದ್ಭುತಗಳಲ್ಲಿ ಒಂದಾದ ತಾಜ್​ ಮಹಲ್​ಗೆ ಭೇಟಿ ನೀಡಿದರು.
ಅಹಮದಾಬಾದ್​ನಿಂದ ಕುಟುಂಬ ಸಮೇತ ತೆರಳಿದ ಟ್ರಂಪ್​ ಸಂಜೆ 4.20ರ ಹೊತ್ತಿಗೆ ಆಗ್ರಾಗೆ ಬಂದಿಳಿದರು. ಈ ವೇಳೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್​ ಮತ್ತು ಮುಖ್ಯಮಂತ್ತಿ ಯೋಗಿ ಆದಿತ್ಯಾ ನಾಥ್​ ಟ್ರಂಪ್​ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಸಾಂಪ್ರದಾಯಿಕ ಕಲೆಗಳ ಮೂಲಕ ಟ್ರಂಪ್​ ದಂಪತಿಗೆ ಗೌರವ ಸಲ್ಲಿಸಿದರು. ಬಳಿಕ ಕಾರು ಹತ್ತಿ ಟ್ರಂಪ್​ ದಂಪತಿ ತಾಜ್​ ಮಹಲ್​ ಕಡೆ ಹೊರಟರು.
ತಾಜ್​ ಮಹಲ್​ಗೆ ಆಗಮಿಸಿದ ಟ್ರಂಪ್​ ದಂಪತಿಗೆ ಅಚ್ಚರಿಯು ಕಾದಿತ್ತು. ವಿವಿಧ ಕಲಾ ತಂಡಗಳು ಟ್ರಂಪ್​ ದಂಪತಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಅಮೆರಿಕ ಮತ್ತು ಭಾರತ ಬಾವುಟ ಹಿಡಿದು ವಿದ್ಯಾರ್ಥಿಗಳು ಟ್ರಂಪ್​ ದಂಪತಿಯನ್ನು ಖಷಿಯಿಂದಲೇ ಸ್ವಾಗತಿಸಿದರು. ರಸ್ತೆಯುದ್ದಕ್ಕೂ ಜನ ವಿಶ್ವದ ದೊಡ್ಡಣ್ಣನನ್ನು ಕಣ್ತುಂಬಿಕೊಳ್ಳಲು ಸಾಲುಗಟ್ಟಿ ನಿಂತಿದ್ದರು. ಅಲ್ಲದೆ, ಟ್ರಂಪ್​ ದಂಪತಿ ಸ್ವಾಗತ ಕೋರುವ ಪೋಸ್ಟರ್​ಗಳು ರಸ್ತೆಯುದ್ದಕ್ಕೂ ರಾರಾಜಿಸುತ್ತಿದ್ದವು.
ಇದಕ್ಕೂ ಮುನ್ನು ಬೆಳಗ್ಗೆಯಷ್ಟೇ ಅಹಮದಾಬಾದ್​ನ ಸರ್ದಾರ್​ ವಲ್ಲಭಭಾಯಿ ಪಟೇಲ್​ ವಿಮಾನ ನಿಲ್ದಾಣಕ್ಕೆ ಪತ್ನಿ ಮೆಲೆನಿಯಾ ಟ್ರಂಪ್​, ಪುತ್ರಿ ಇವಾಂಕ ಮತ್ತು ಅಳಿಯ ಜರೇದ್​ ಕುಶ್ನರ್​ ಹಾಗೂ ಅಮೆರಿಕ ನಿಯೋಗದೊಂದಿಗೆ ಅಧ್ಯಕ್ಷ ಟ್ರಂಪ್​ ಬಂದಿಳಿದರು. ಬಳಿಕ ಮೆರವಣಿಗೆಯಲ್ಲಿ ಸ್ಮರಣೀಯ ಸ್ವಾಗತದೊಂದಿಗೆ ವಿಶ್ವದ ಅತಿದೊಡ್ಡ ಕ್ರೀಡಾಂಗಣ ಮೊಟೇರಾ ಸ್ಟೇಡಿಯಂಗೆ ತೆರಳಿದರು. ನಂತರ “ನಮಸ್ತೆ ಟ್ರಂಪ್​” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ತಾಜ್​ ಮಹಲ್ ನೋಡುವ ಇಂಗಿತವನ್ನೂ ಟ್ರಂಪ್​ ವ್ಯಕ್ತಪಡಿಸಿದ್ದರು.(ಏಜೆನ್ಸೀಸ್​)
Agra: US President Donald Trump and First Lady Melania Trump at the Taj Mahal.pic.twitter.com/jjyrHrC1Yz
— ANI (@ANI)February 24, 2020

Agra: US President Donald Trump and First Lady Melania Trump to soon arrive at the Taj Mahal.pic.twitter.com/olIExcsUNk
— ANI (@ANI)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
