ಭೋಪಾಲ್:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಸಭೆಯ ವೇದಿಕೆಯಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್​ ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರ ಕಾಣಿಸಿಕೊಂಡಿದ್ದು, ರಾಹುಲ್​ ಸೇರಿ ಕಾಂಗ್ರೆಸ್​ ನಾಯಕರು ಮುಜುಗರ ಅನುಭವಿಸಬೇಕಾಯಿತು.
ಇದನ್ನೂ ಓದಿ:‘ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡಿದವರನ್ನೆಲ್ಲ ಜೈಲಿಗೆ ಹಾಕಲು ಸಾಧ್ಯವಿಲ್ಲ’: ಸುಪ್ರೀಂಕೋರ್ಟ್​
ಮಧ್ಯಪ್ರದೇಶದ ಮಂಡ್ಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ಸಭೆಯ ವೇಧಿಕೆ ಫ್ಲೆಕ್ಸ್​ನಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗನ್ ಸಿಂಗ್ ಕುಲಾಸ್ತೆ ಅವರ ಚಿತ್ರ ಕಾಣಿಸಿಕೊಂಡಿತ್ತು. ಆದರೆ ಮಾಂಡ್ಲಾದಲ್ಲಿ ರಜನೀಶ್ ಹರಿವಂಶ್ ಸಿಂಗ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಇದು ಕಾಂಗ್ರೆಸ್ಸಿಗರು ಸಾರ್ವಜನಿಕರ ಎದುರು ನಗೆಪಾಟಲಿಗೆ ಈಡಾಗಬೇಕಾಯಿತು.
ರಜನೀಶ್ ಹರಿವಂಶ್​ ಪರ ಪ್ರಚಾರದ ಭಾಗವಾಗಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿತ್ತು. ಸ್ಥಳದಲ್ಲಿ ಅಳವಡಿಸಲಾಗಿದ್ದ ಬೃಹತ್ ಬೋರ್ಡ್‌ನಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿದಂತೆ ನಾಯಕರ ಚಿತ್ರಗಳಿದ್ದವು. ಆದರೆ ಮುದ್ರಿಸುವಾಗ ಮಾನವ ತಪ್ಪಿನಿಂದ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್ ವಿವರಿಸಿದೆ.
ಪ್ರತಿಯೊಂದರಲ್ಲೂ ರಾಜಕೀಯ ಮಾಡುವುದು ಬಿಜೆಪಿಯ ಅಭ್ಯಾಸವಾಗಿದ್ದು, ಇದರ ವಿರುದ್ಧ ನಾವು ಏನೂ ಹೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಕೇಂದ್ರ ಸಚಿವ ಮತ್ತು ಆರು ಬಾರಿ ಸಂಸದರಾಗಿರುವ ಫಗನ್ ಸಿಂಗ್ ಕುಲಸ್ತೆ 1996 ರಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಧ್ಯಪ್ರದೇಶದಲ್ಲಿ ಲೋಕಸಭೆ ಚುನಾವಣೆ ನಾಲ್ಕು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಚುನಾವಣಾ ದಿನಾಂಕಗಳು ಏಪ್ರಿಲ್ 26, ಮೇ 7 ಮತ್ತು ಮೇ 13. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇನ್ನುಳಿದ 28 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು. ಚಿಂದ್ವಾರಾ ಮಾತ್ರ ಕಾಂಗ್ರೆಸ್‌ ಉಳಿಸಿಕೊಂಡಿತ್ತು. ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಮಾತ್ರ ಕಾಂಗ್ರೆಸ್ ಸಂಸದರಾಗಿದ್ದಾರೆ.
ಭಾರತದಿಂದ ಅಗತ್ಯ ವಸ್ತುಗಳ ರಫ್ತು ನಂತರ ತೀವ್ರ ಟೀಕಾಪ್ರಹಾರಕ್ಕೆ ಗುರಿಯಾದ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 13 =
Remember me
