ಅಹಮದಾಬಾದ್:ಯುವಕರ ತಂಡವೊಂದು ಚಲಿಸುತ್ತಿದ್ದ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟಿಕೆ ಮೆರೆದವರನ್ನು ಪೊಲೀಸರು ಬಂಧಿಸಿ, ರಸ್ತೆ ಮಧ್ಯೆಯೇ ಬಸ್ಕಿ ಹೊಡೆಸಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಹೊಡೆಯುವುದು ಸಾಮಾನ್ಯ. ಆದರೆ ಎಲ್ಲಿ ಮತ್ತು ಹೇಗೆ ಪಟಾಕಿ ಸಿಡಿಸುತ್ತೇವೆ ಎಂಬುವುದು ಕೂಡ ಮುಖ್ಯವಾಗುತ್ತದೆ. ಪಟಾಕಿ ಸಿಡಿಸಿ ಸಂಭ್ರಮಿಸುವಾಗ ಸಾರ್ವಜನಿಕವಾಗಿ ಯಾವುದೇ ತೊಂದರೆಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಆದರೆ ಈ ಯುವಕರು ಪಟಾಕಿ ಸಿಡಿಸುವ ಸಂಭ್ರಮದ ನೆಪದಲ್ಲಿ ಹುಚ್ಚಾಟ ಮೆರೆದಿದ್ದಾರೆ.
ಮುಖ್ಯರಸ್ತೆಯಲ್ಲಿ ಚಲಿಸುತ್ತಿರುವ ಕಾರಿನ ಬೋನೆಟ್ ಮೇಲೆ ಕುಳಿತುಕೊಂಡು ಪಟಾಕಿ ಸಿಡಿದ್ದಾರೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಯುವಕರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಸಾರ್ವಜನಿಕವಾಗಿ ಪುಂಡಾಟ ಮೆರೆದ ಯುವಕರಿಗೆ, ಪೊಲೀಸರು ರಸ್ತೆ ಮಧ್ಯೆಯೇ ಶಿಕ್ಷೆ ನೀಡಿದ್ದಾರೆ. ಬಂಧಿಸಿದ ಅಷ್ಟೂ ಜನ ಯುವಕರಿಗೆ ರಸ್ತೆ ಮಧ್ಯೆಯೇ ಬಸ್ಕಿ ತೆಗೆಯುವಂತೆ ಹೇಳಿದ್ದಾರೆ. ಈ ವಿಡಿಯೋವನ್ನು ಅಹಮದಾಬಾದ್ ಪೊಲೀಸರು ತಮ್ಮ ಅಧಿಕೃತ ಟ್ವಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪೊಲೀಸರು ಈ ಕ್ರಮವನ್ನು ಸಾರ್ವಜನಿಕರು ಪ್ರಶಂಸಿಸಿದ್ದಾರೆ.(ಏಜೆನ್ಸೀಸ್)
#AhmedabadPolicepic.twitter.com/ddwZCFd9Gf— Ahmedabad Police 👮‍♀️અમદાવાદ પોલીસ (@AhmedabadPolice)October 27, 2022
#AhmedabadPolicepic.twitter.com/ddwZCFd9Gf
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:17 − eight =
Remember me
