ಬೆಂಗಳೂರು:ಇತ್ತ, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಿ ಕಾಂಗ್ರೆಸ್​ನ ಉತ್ಸಾಹ ಇಮ್ಮಡಿಸುತ್ತಿದ್ದಂತೆ, ಅತ್ತ ದೆಹಲಿಯಲ್ಲಿ ಮಹತ್ವದ ಬೆಳವಣಿಗೆ ನಡೆದು ಪಕ್ಷದ ಚುಕ್ಕಾಣಿಯೂ ರಾಜ್ಯಕ್ಕೆ ದಕ್ಕುವ ಸನ್ನಿವೇಶ ನಿರ್ವಣವಾಗಿದೆ. ಹಿರಿಯ ಕಾಂಗ್ರೆಸ್ಸಿಗ, ಗಾಂಧಿ ಕುಟುಂಬಕ್ಕೆ ನಿಷ್ಠ ಹಾಗೂ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಸ್ಥಾನ ದೊರೆಯುವುದು ಬಹುತೇಕ ಖಚಿತವಾಗಿದೆ.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ ಖರ್ಗೆ ಉಮೇದುವಾರಿಕೆ ಸಲ್ಲಿಸಿದರು. ಹತ್ತು ರಾಜ್ಯಗಳ ಕಾಂಗ್ರೆಸ್ ಪ್ರತಿನಿಧಿಗಳು ಖರ್ಗೆ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ. ಗಾಂಧಿ ಕುಟುಂಬ ಮಾತ್ರವಲ್ಲದೆ, ಜಿ-23 ಬಣದವರೂ ಖರ್ಗೆಗೆ ಬೆಂಬಲ ಸೂಚಿಸಿರುವುದರಿಂದ ಅವರ ಆಯ್ಕೆ ನಿಶ್ಚಿತವಾಗಿದೆ. ಸಂಸದ ಶಶಿ ತರೂರ್ ಹಾಗೂ ಕೆ.ಎನ್. ತ್ರಿಪಾಠಿ ಹೆಸರಿಗಷ್ಟೇ ಕಣದಲ್ಲಿ ಇರುವಂತಾಗಿದೆ.
ಗುಂಡ್ಲುಪೇಟೆ (ಚಾಮರಾಜನಗರ):ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ರಾಜ್ಯದಲ್ಲಿ ಶುಕ್ರವಾರ ಅತ್ಯುತ್ಸಾಹದಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಕಾಂಗ್ರೆಸ್ ಹಮ್ಮಿಕೊಂಡಿರುವ ಯಾತ್ರೆ ತನ್ನ ಉದ್ದೇಶವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಾ, ಶಕ್ತಿ- ಉತ್ಸಾಹ ಕುಂದಿಲ್ಲ ಎಂದು ಸಂದೇಶ ನೀಡುತ್ತ ರಾಜ್ಯದಲ್ಲಿ ಮೊದಲ ದಿನ ಪೂರ್ಣಗೊಳಿಸಿದೆ. ಊಟಿ- ಕ್ಯಾಲಿಕಟ್ ಹೆದ್ದಾರಿ ಪಕ್ಕದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್​ರನ್ನು ರಾಜ್ಯಕ್ಕೆ ಬರಮಾಡಿಕೊಳ್ಳಲಾಯಿತು. ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೈ ಹಿಡಿದು ರಾಹುಲ್ ನಗಾರಿ ಬಾರಿಸಿದ್ದು ವಿಶೇಷವಾಗಿತ್ತು. ರಾಹುಲ್ ಅಕ್ಕಪಕ್ಕದಲ್ಲೇ ಇಬ್ಬರೂ ಹೆಜ್ಜೆ ಹಾಕಿದರು.
ಯಾತ್ರೆಯುದ್ದಕ್ಕೂ ದೇಶದ ಜನರ ದನಿಯನ್ನು ಕೇಳಲಾಗುವುದು. ಇದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ
|ರಾಹುಲ್ ಗಾಂಧಿಕಾಂಗ್ರೆಸ್ ನಾಯಕ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + seven =
Remember me
