ಮಾಲೆ:ಮಾಲ್ಡೀವ್ಸ್​ನ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಬುಧವಾರದಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ.ಈ ಸಮಯದಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜೈ ಶಂಕರ್​ ಅವರನ್ನು ಭೇಟಿಯಾಗಲಿದ್ದು ಮೊದಲ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಲಿದ್ದಾರೆ.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಸಿಬಿಐ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದ ಪರಮೇಶ್ವರ್​
ಮೇ 8 ರಿಂದ 10ರ ಅವಧಿಯಲ್ಲಿ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ದೀರ್ಘಾಕಾಲದ ಪಾಲುದಾರಿಕೆ ಬಲಗೊಳಿಸಿಸುವ ಮತ್ತು ಇನ್ನಷ್ಟು ವಿಸ್ತರಿಸುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
Departing to New Delhi on my very first bilateral official visit.
Looking forward to meeting my counterpart Minister of External Affairs, Dr.@DrSJaishankar, and discuss deepening and enhancing cooperation between#Maldivesand#Indiafor the mutual benefit of our peoples.pic.twitter.com/KJVcNcXQFF
— Moosa Zameer (@MoosaZameer)May 8, 2024

ಚೀನಾ ಪರ ಒಲವುಳ್ಳ ಅಲ್ಲಿನ ಅಧ್ಯಕ್ಷ ಮೊಹಮ್ಮದ್​ ಮಯಿಝು ಅವರು ಅಧಿಕಾರ ವಹಿಸಿಕೊಂಡ ಆರು ತಿಂಗಳಾಗಿದ್ದು ಈ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ. ಈ ವೇಳೆ ಮಾಲ್ಡೀವ್ಸ್​ನ ಉನ್ನತಮಟ್ಟದ ಅಧಿಕಾರಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತೆ ಮರುಕಳಿಸುತ್ತ ಎಂಬುದು ಕುತೂಹಲ ಮೂಡಿಸಿದೆ.
ನನ್ನ ಮೊದಲ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ನಿರ್ಗಮಿಸುತ್ತಿದ್ದೇನೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಜೈ ಶಂಕರ್​ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮಾಲ್ಡೀವ್ಸ್​ನ ವಿದೇಶಾಂಗ ಸಚಿವ ಮೂಸಾ ಜಮೀರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
