ನವದೆಹಲಿ:ಲಂಡನ್​ನಲ್ಲಿ ಏರ್​​ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಲಂಡನ್​ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲಂಡನ್​ನಲ್ಲಿನ ಹೆಸರಾಂತ ಹೊಟೇಲ್​ನಲ್ಲಿ ಮಹಿಳಾ ಸಿಬ್ಬಂದಿ ವಿಶ್ರಾಂತಿ ಪಡೆಯುತ್ತಿದ್ದ ಕೊಠಡಿಗೆ ಅಪರಿಚಿತ ವ್ಯಕ್ತಿ ನುಗ್ಗಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ್ದಾನೆ. ಮಹಿಳೆಯು ಸಹಾಯಕ್ಕಾಗಿ ಕಿರುಚಿದಾಗ ಅಕ್ಕಪಕ್ಕದ ರೂಮ್​ನಲ್ಲಿದ್ದ ಆಕೆಯ ಸಹದ್ಯೋಗಿಗಳು ತಕ್ಷಣವೆ ನೆರವಿಗಾಗಿ ಬಂದಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ:ಪಾಕ್​ ಅಥ್ಲೀಟ್​​​ ಅರ್ಷದ್​ ನದೀಮ್​ ಬಯೋಪಿಕ್​ ತೆಗೆದ್ರೆ ನಾಯಕ ಇವರಾಗ್ಬೇಕಂತೆ; ನೀರಜ್​ ಹೇಳಿದ್ದು ಈ ನಟನ ಬಗ್ಗೆ
ತನ್ನ ಸಿಬ್ಬಂದಿಯ ಸುರಕ್ಷತೆ, ಭದ್ರತೆ ಹಾಗೂ ಯೋಗಕ್ಷೇಮವೆ ಮೊದಲ ಆದ್ಯತೆ. ಪ್ರಮುಖ ಅಂತಾರಾಷ್ಟ್ರೀಯ ಹೋಟೆಲ್​​ ರೂಮ್​​ಗೆ ಅಕ್ರಮವಾಗಿ ವ್ಯಕ್ತಿಯೊಬ್ಬ ನುಗ್ಗಿ ತನ್ನ ಮಹಿಳಾ ಸಿಬ್ಬಂದಿ ಹಲ್ಲೆ ನಡೆಸಿರುವುದು ದುಃಖವಾಗಿದೆ. ಈ ವಿಷಯವನ್ನು ಕಾನೂನುಬದ್ಧವಾಗಿ ಮುಂದುವರಿಸಲು ಪ್ರಯತ್ನಿಸುತ್ತಿದ್ದೇವೆ. ಸಿಬ್ಬಂದಿಯ ಖಾಸಗಿತನವನ್ನು ಗೌರವಿಸಬೇಕು ಎಂದು ಏರ್​​ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ಸದ್ಯ ಈ ವಿಷಯವನ್ನು ಲಂಡನ್ ಪೊಲೀಸರು ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ಭಾಗಿಯಾಗಿರುವ ಸಿಬ್ಬಂದಿಯ ಗೌಪ್ಯತೆಯನ್ನು ಗೌರವಿಸಬೇಕು. ಘಟನೆಯ ಸಂಪೂರ್ಣ ತನಿಖೆ ಹಾಗೂ ಸಂತ್ರಸ್ತೆಗೆ ನ್ಯಾಯ ಒದಗಿಸಲು ಸ್ಥಳೀಯ ಅಧಿಕಾರಿಗೆ ಸಹಕರಿಸುವುದಾಗಿ ಏರ್​ಲೈನ್ಸ್​​ ದೃಢಪಡಿಸಿದೆ. ಅಪರಿಚಿತ ವ್ಯಕ್ತಿಯು ಮಹಿಳೆಯ ಮೇಲೆ ಬಟ್ಟೆಯ ಹ್ಯಾಂಗರ್​ನಿಂದ ಹಲ್ಲೆ ಮಾಡಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯನ್ನು ನೆಲದ ಮೇಲೆ ತಳ್ಳಿದ್ದಾನೆ. ಆಕೆಯು ತೀವ್ರವಾಗಿ ಗಾಯಗೊಂಡಿದ್ದು, ಭಾರತಕ್ಕೆ ಹಿಂದಿರುಗಿದ್ದಾರೆಎನ್ನಲಾಗಿದೆ.
ಘಟನೆ ಬಳಿಕ ಆತನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ.ಲಂಡನ್​ನ ಹೀಥ್ರೂನಲ್ಲಿರುವ ಹೋಟೆಲ್​ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ನೈಜೀರಿಯಾ ಪ್ರಜೆಯಾಗಿದ್ದು ಆತನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. (ಏಜೆನ್ಸೀಸ್​)
ದಂಡ ಕಟ್ಟಲು ಕೇಳಿದ ಟಿಟಿಇ ಮೇಲೆ ಗೂಂಡಾವರ್ತನೆ; ರೈಲ್ವೆ ಪೊಲೀಸರನ್ನು ಕಂಡಾಕ್ಷಣ ಪ್ರಯಾಣಿಕರು ಮಾಡಿದ್ದೇನು ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + ten =
Remember me
