ಮುಂಬೈ:ಮುಕೇಶ್​ ಅಂಬಾನಿ-ನೀತಾ ಅಂಬಾನಿ ದಂಪತಿಯ ಕಿರಿಯ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಈ ಅದ್ಧೂರಿ ವಿವಾಹ ಕಾರ್ಯಕ್ರಮದಲ್ಲಿ ಬಾಲಿವುಡ್​ ಸೇರಿದಂತೆ ಸೌತ್​ ಸಿನಿ ಇಂಡಸ್ಟ್ರಿಯ ಖ್ಯಾತನಾಮರು ಭಾಗಿಯಾಗಿದ್ದರು. ನೂತನ ವಧು-ವರರನ್ನು ಆಶೀರ್ವದಿಸಲು ಬಚ್ಚನ್​ ಕುಟುಂಬವು ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಎಲ್ಲರ ಗಮನ ಸೆಳೆಯಿತು. ಆದರೆ, ಇದರ ನಡುವೆಯೇ ವದಂತಿ ಒಂದು ಹಬ್ಬಿದ್ದು, ಈ ವಿಚಾರ ಬಿಟೌನ್​ ಅಂಗಳದಲ್ಲಿ ಸಖತ್​ ಸೌಂಡ್​ ಮಾಡುತ್ತಿದೆ.
ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಹಾಗೂ ನಟ ಅಭಿಷೇಕ್‌ ಬಚ್ಚನ್‌ ದಾಂಪತ್ಯದಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವದಂತಿ ಹಬ್ಬಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅನಂತ್ ಅಂಬಾನಿ ಹಾಗೂ ರಾಧಿಕಾ ಮದುವೆ ಕಾರ್ಯಕ್ರಮದಲ್ಲಿ ಇಬ್ಬರೂ ಬೇರೆ ಬೇರೆಯಾಗಿ ಕಾಣಿಸಿಕೊಂಡಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗುತ್ತಿದೆ.
#WATCH| Actor Aishwarya Rai Bachchan along with her daughter Aaradhya Bachchan arrive for Anant Ambani-Radhika Merchant wedding at Jio World Convention Centre in Mumbaipic.twitter.com/1VeCtuhe5O
ಇದನ್ನೂ ಓದಿ:ಡೆಲ್ಲಿ ಕ್ಯಾಪಿಟಲ್ಸ್​ ಕೋಚ್​ ಹುದ್ದೆಯಿಂದ ರಿಕಿ ಪಾಂಟಿಂಗ್​ ವಜಾ
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಅಮಿತಾಭ್ ಜೊತೆಗೆ ಜಯಾ ಅಭಿಷೇಕ್, ಬಿಗ್ ಬಿ ಮಗಳು ಶ್ವೇತಾ ಮತ್ತು ಅವರ ಅಳಿಯ ಕೂಡ ಕಾಣಿಸಿಕೊಂಡಿದ್ದಾರೆ. ಅಮಿತಾಬ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಮತ್ತು ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ಕಾಣಿಸಿಕೊಂಡಿದ್ದಾರೆ. ಆದರೆ ಐಶ್ವರ್ಯಾ ರೈ ಬಚ್ಚನ್ ಕುಟುಂಬದೊಂದಿಗೆ ಕಾಣಿಸಿಕೊಂಡಿಲ್ಲ.. ಐಶ್ವರ್ಯಾ ತನ್ನ ಮಗಳು ಆರಾಧ್ಯ ಜೊತೆ ಸಪರೇಟ್​ ಆಗಿ ಕ್ಯಾಮರಾಗಳಿಗೆ ಪೋಸ್​ ನೀಡಿದ್ದಾರೆ. ಇತ್ತ ಇವರಿಬ್ಬರು ಬೇರೆಯಾಗುತ್ತಿದ್ಧಾರೆ ಎಂದು ಭಾವಿಸಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಸರದಿಂದ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಈ ಹಿಂದೆ ಐಶ್ವರ್ಯಾ ಹಾಗೂ ಅಭಿ ಡಿವೋರ್ಸ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಇಬ್ಬರು ಇದರ ಬಗ್ಗೆ ಮಾತನಾಡಿರಲಿಲ್ಲ. ಡಿವೋರ್ಸ್‌ ಸುದ್ದಿ ಬೆನ್ನಲ್ಲೇ ಮಗಳು ಆರಾಧ್ಯಳ ಶಾಲಾ ಕಾರ್ಯಕ್ರಮದಲ್ಲಿ ಐಶ್ವರ್ಯಾ ಹಾಗೂ ಅಭಿಷೇಕ್‌ ಬಚ್ಚನ್‌ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಇದೀಗ ಮತ್ತೊಮ್ಮೆ ಬೇರೆ ಬೇರೆ ಕಾಣಿಸಿಕೊಳ್ಳುವ ಮೂಲಕ ವಿಚ್ಛೇದನ ವದಂತಿಗೆ ಮತ್ತೊಮ್ಮೆ ಪುಷ್ಠಿ ಸಿಕ್ಕಂತಾಗಿದೆ. ಇವರಿಬ್ಬರ ವಿಚ್ಛೇದನ ವದಂತಿ ಸುಳ್ಳಾಗಲಿ ಎಂದು ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.
She’s the Queen Aishwarya Rai NOT Bachchan anymore. She came alone with her daughter at Ambani’s wedding.Glad she finally gave up on the pretense that everything is fine.She has a bad taste in men either they are @$$ holes like Salmandar Khan or a Brat like Abhishek Bachchanpic.twitter.com/nlFH4qyd8J
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + six =
Remember me
