ಮುಂಬೈ:ಕರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರಲ್ಲಿಯೂ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮೊದಲು ಸ್ವಯಂ ಕ್ವಾರಂಟೈನ್‌ನಲ್ಲಿ ಇದ್ದರು. ಇದೀಗ ಇಬ್ಬರಿಗೂ ಕರೊನಾ ಪಾಸಿಟಿವ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಶ್ವರ್ಯ ರೈ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.
ಇದನ್ನೂ ಓದಿ:ಇನ್ನೊಂದು ವಾರದಲ್ಲಿ ಅಮಿತಾಬ್​ ಬಚ್ಚನ್​, ಅಭಿಷೇಕ್​ ಆಸ್ಪತ್ರೆಯಿಂದ ಡಿಸ್ಚಾರ್ಜ್​!
ಇದಾಗಲೇ ನಟರಾದ ಅಮಿತಾಭ್‌ ಬಚ್ಚನ್‌ ಹಾಗೂ ಅಭಿಷೇಕ್‌ ಬಚ್ಚನ್‌ ಅವರಿಗೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜುಲೈ 12 ರಂದು ಅಭಿಷೇಕ್ ಟ್ವೀಟ್ ಮಾಡುವ ಮೂಲಕ ಐಶ್ವರ್ಯ ಮತ್ತು ಆರಾಧ್ಯ ಅವರಿಗೂ ಕರೊನಾ ಪಾಸಿಟಿವ್‌ ಬಂದಿದ್ದು, ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದಿದ್ದರು. ತಮ್ಮ ತಾಯಿ ಸೇರಿದಂತೆ ಕುಟುಂಬದ ಉಳಿದವರಿಗೆ ಸೋಂಕು ತಗುಲಿಲ್ಲ ಎಂದೂ ಅವರು ಹೇಳಿದ್ದರು.
ಅಮಿತಾಭ್‌ ಮತ್ತು ಅಭಿಷೇಕ್‌ ಬಚ್ಚನ್‌ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎನ್ನಲಾಗಿದೆ.
ಫೇಸ್‌ಬುಕ್‌ ಗೆಳತಿಗಾಗಿ ಪಾಕ್‌ಗೆ ಹೊರಟು ಗಡಿಯಲ್ಲಿ ಸಿಕ್ಕಿಬಿದ್ದ ಪ್ರೇಮಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + eight =
Remember me
