ಜೈಪುರ:ಪ್ರವಾದಿ ಮುಹಮ್ಮದ್​ ಬಗ್ಗೆ ಕಾಮೆಂಟ್​ ಮಾಡಿ ದೇಶಾದ್ಯಂತ ಮಾತ್ರವಲ್ಲದೆ, ಗಲ್ಫ್​ ರಾಷ್ಟ್ರಗಳಲ್ಲೂ ಆಕ್ರೋಶದ ಕಿಡಿ ಹೊತ್ತಿಸಿ, ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾರ ತಲೆ ಕಡಿದವರಿಗೆ ಮನೆ ಉಡುಗೊರೆ ನೀಡುವುದಾಗಿ ಕ್ಯಾಮೆರಾ ಮುಂದೆಯೇ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ರಾಜಸ್ಥಾನದ ಅಜ್ಮೇರ್​ ದರ್ಗಾದ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ.
ವಿಡಿಯೋ ತುಣುಕೊಂದು ವೈರಲ್​ ಆದ ಬೆನ್ನಲ್ಲೇ ರಾಜಸ್ಥಾನ ಪೊಲೀಸರು ಸೋಮವಾರ ರಾತ್ರಿ ಎಫ್​ಐಆರ್​ ದಾಖಲಿಸಿದ್ದರು. ಇದೀಗ ಆರೋಪಿ ಸಲ್ಮಾನ್​ ಚಿಸ್ತಿಯನ್ನು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ.
ವಿಡಿಯೋದಲ್ಲಿ ಆರೋಪಿ ಸಲ್ಮಾನ್​, ನೂಪುರ್​ ಶರ್ಮಾ ತಲೆಯನ್ನು ಕಡಿದು ತಂದವರಿಗೆ ಮನೆ ಕೊಡುವುದಾಗಿ ಆಫರ್​ ಮಾಡಿದ್ದ. ಅಲ್ಲದೆ, ಪ್ರವಾದಿಯನ್ನು ಅವಹೇಳನ ಮಾಡಿದ್ದಕ್ಕಾಗಿ ಆಕೆಯನ್ನು ಗುಂಡಿಕ್ಕಿ ಸಾಯಿಸುವುದಾಗಿಯೂ ವಿಡಿಯೋದಲ್ಲಿ ಹೇಳಿದ್ದಾನೆ. ನೀನು ಎಲ್ಲ ಮುಸ್ಲಿಂ ದೇಶಗಳಿಗೆ ಪ್ರತಿಕ್ರಿಯೆ ನೀಡಲೇಬೇಕು. ನಾನಿದನ್ನು ರಾಜಸ್ಥಾನದ ಅಜ್ಮೇರ್​ನಿಂದ ಹೇಳುತ್ತಿದ್ದೇನೆ. ಈ ಸಂದೇಶವು ಹುಜೂರ್ ಖ್ವಾಜಾ ಬಾಬಾ ಕಾ ದರ್ಬಾರ್‌ನಿಂದ ಬಂದಿದೆ ಎಂದು ಸಲ್ಮಾನ್​ ಹೇಳಿದ್ದಾನೆ.
ಆರೋಪಿ ಸಲ್ಮಾನ್​, ಅಪರಾಧ ಹಿನ್ನೆಲೆಯನ್ನು ಹೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ದಲ್ವೀರ್ ಸಿಂಗ್ ಫೌಜ್ದಾರ್ ಹೇಳಿದ್ದಾರೆ. ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೇದಿನ್ ಅಲಿ ಖಾನ್ ಅವರ ಕಚೇರಿಯು ಸಹ ವೈರಲ್​ ವಿಡಿಯೋವನ್ನು ಖಂಡಿಸಿದೆ ಮತ್ತು ದೇಗುಲವು ಕೋಮು ಸೌಹಾರ್ದತೆಯ ಸ್ಥಳವಾಗಿದೆ ಎಂದು ಹೇಳಿದೆ. ವಿಡಿಯೋದಲ್ಲಿ ಸಲ್ಮಾನ್​ ಹೇಳಿರುವ ಮಾತಿಗೂ ನಮಗೂ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ಅದನ್ನು ಖಂಡಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ನೂಪುರ್​ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದಕ್ಕೆ ಟೈಲರ್​ ಕನ್ಹಯ್ಯ ಲಾಲ್ ಅವರನ್ನು ಅನ್ಯ ಧರ್ಮದ ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ರಾಜಸ್ಥಾನದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಸಾಮಾಜಿಕ ಜಾಲತಾಣದಿಂದ ಸಾಕಷ್ಟು ಅನಾಹುತಗಳು ಸಂಬಂಧಿಸುತ್ತಿದ್ದು, ಜಾಲತಾಣಗಳ ಮೇಲೆ ಕಡಿವಾಣ ಹಾಕಲೇಬೇಕಿದೆ ಎಂಬ ಮಾತುಗಳು ಕೇಳಿಬರುತ್ತಿವೆ.(ಏಜೆನ್ಸೀಸ್​) ​
ಆಸ್ತಿ ವಿಚಾರವಾಗಿ ಕೊಲೆಯಾಗಿದೆ ಅನ್ನೋದು ಸುಳ್ಳು: ಸ್ಫೋಟಕ ಸಂಗತಿ ಬಿಚ್ಚಿಟ್ಟ ಆರೋಪಿ ಮಹಾಂತೇಶ್​ ಪತ್ನಿ

ಚಂದ್ರಶೇಖರ ಗುರೂಜಿ ಕೊಲೆಗೈದ ಆರೋಪಿಗಳು ಅಷ್ಟು ಬೇಗ ಸಿಕ್ಕಿಬೀಳಲು ಆ ಒಂದು ಫೋನ್​ ಕಾಲ್ ನೆರವಾಯ್ತಾ?​

ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ; ಷೇರುಪೇಟೆಯಲ್ಲಿ ಏರಿಳಿತ, ಜೂನ್​ನಲ್ಲಿ ವಾಹನ ಮಾರಾಟ ಅಧಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 4 =
Remember me
