ನವದೆಹಲಿ:ಅಜ್ಮೀರ್ ಲೈಂಗಿಕ ಹಗರಣದಲ್ಲಿ 100 ಕ್ಕೂ ಹೆಚ್ಚು ಹುಡುಗಿಯರ ಮೇಲೆ ಅತ್ಯಾಚಾರವೆಸಗಿ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣದಲ್ಲಿ ಪೋಕ್ಸೊ ನ್ಯಾಯಾಲಯವು 6 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಆರೋಪಿಗಳಿಗೆ ತಲಾ 5 ಲಕ್ಷ ರೂ. ದಂಡ ವಿಧಿಸಿದೆ.
ಇದನ್ನೂ ಓದಿ:ಸಚಿವ ಎಂ.ಬಿ.ಪಾಟೀಲ್​ ಅಧ್ಯಕ್ಷತೆಯಲ್ಲಿ ಕೆಎಚ್ಐಆರ್ ಸಿಟಿ ಸಲಹಾ ಮಂಡಳಿಯ ಪ್ರಥಮ ಸಭೆ
1992ರಲ್ಲಿ ಬೆಳಕಿಗೆ ಬಂದ ಅಜ್ಮೀರ್ ಲೈಂಗಿಕ ಹಗರಣದ ಆರೋಪಿಗಳಾದ ನಫೀಸ್ ಚಿಶ್ತಿ, ನಸೀಮ್ ಅಲಿಯಾಸ್ ಟಾರ್ಜನ್, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ ಮತ್ತು ಸೈಯದ್ ಜಮೀರ್ ಹುಸೇನ್ ಅವರನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ವೀರೇಂದ್ರ ಸಿಂಗ್ ಹೇಳಿದ್ದಾರೆ.
11 ರಿಂದ 20 ವರ್ಷದೊಳಗಿನ ಕಾಲೇಜು ಮತ್ತು ಶಾಲೆಗೆ ಹೋಗುವ ಹುಡುಗಿಯರಲ್ಲಿ ಗ್ಯಾಂಗ್‌ನ ಸದಸ್ಯರು ಸ್ನೇಹ ಬೆಳೆಸಿ, ದೈಹಿಕವಾಗಿ ಸಂಪರ್ಕವೇರ್ಪಟ್ಟ ಸಂದರ್ಭಗಳಲ್ಲಿ ಅವರ ಫೋಟೊ ತೆಗೆದಿದ್ದು, ನಂತರ ಅವರ ಮೇಲೆ ಅತ್ಯಾಚಾರವೆಸಗಿದ್ದರು. ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದರು. 12 ಮಂದಿ ವಿರುದ್ಧ ಪ್ರಕರಣದ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು.
ಆರೋಪಿಗಳ ಪೈಕಿ, ನಸೀಮ್ ಅಲಿಯಾಸ್ ಟಾರ್ಜನ್ 1994ರಲ್ಲಿ ತಲೆಮರೆಸಿಕೊಂಡಿದ್ದ, ಜಹೂರ್ ಚಿಶ್ತಿ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ) ಅಡಿಯಲ್ಲಿ ತಪ್ಪಿತಸ್ಥರೆಂದು ಸಾಬೀತಾಯಿತು. .ಆತನ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ಸ್ಕಿಜೋಫ್ರೇನಿಯಾ ರೋಗನಿರ್ಣಯ ಮಾಡಿದ ನಂತರ ಫಾರೂಕ್ ಚಿಶ್ತಿ ವಿಚಾರಣೆ ಪ್ರತ್ಯೇಕವಾಗಿ ಮುಂದುವರೆದಿದ್ದು 2007 ರಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆರೋಪಿಗಳ ಪೈಕಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇತರ ಎಂಟು ಆರೋಪಿಗಳಿಗೆ 1998 ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ನಫೀಸ್ ಚಿಶ್ತಿ, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ, ಸೈಯದ್ ಜಮೀರ್ ಹುಸೇನ್ ಮತ್ತು ಅಲ್ಮಾಸ್ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಸಲಾಯಿತು.
ಮೊದಲ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾದ ಮತ್ತು ತಲೆಮರೆಸಿಕೊಂಡಿದ್ದ ನಫೀಸ್ ಚಿಸ್ತಿ, ಸಲೀಂ ಚಿಶ್ತಿ, ಇಕ್ಬಾಲ್ ಭಾಟಿ, ಸೊಹೈಲ್ ಗನಿ, ಸೈಯದ್ ಜಮೀರ್ ಹುಸೇನ್ ಮತ್ತು ನಸೀಮ್ ಅಲಿಯಾಸ್ ಟಾರ್ಜನ್ ಸೇರಿದಂತೆ ಉಳಿದ ಐದು ಆರೋಪಿಗಳಿಗೆ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಇತರ ಆರೋಪಿಗಳು ತಮ್ಮ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಅಥವಾ ನ್ಯಾಯಾಲಯಗಳಿಂದ ಖುಲಾಸೆಗೊಳಿಸಿದ್ದಾರೆ. ಮೊದಲ ಚಾರ್ಜ್ ಶೀಟ್ ಸಮಯದಲ್ಲಿ ಅವರ ತನಿಖೆ ಬಾಕಿ ಇದ್ದ ಕಾರಣ ಉಳಿದ ಆರು ಆರೋಪಿಗಳಿಗೆ ಪ್ರತ್ಯೇಕ ವಿಚಾರಣೆ ನಡೆಸಲಾಯಿತು ಎಂದು ವಕೀಲರು ಹೇಳಿದ್ದಾರೆ. ಅಜ್ಮೀರ್‌ನ ಪ್ರಮುಖ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಸಂತ್ರಸ್ತರನ್ನು ಫಾರ್ಮ್‌ಹೌಸ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಲಾಯಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 7 =
Remember me
