ನವದೆಹಲಿ:ಲೋಕಸಭೆ ಚುನಾವಣೆಯ ಸಮಯದಲ್ಲೇ ಹಲವು ಪಕ್ಷಗಳು ಮತದಾನಕ್ಕೂ ಮುನ್ನವೇ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿವೆ. ಹಣದ ಕೊರತೆಯಿಂದ ಹಲವು ಅಭ್ಯರ್ಥಿಗಳು ಹಿಂದೆ ಸರಿದ ಘಟನೆಗಳು ನಡೆಯುತ್ತಿವೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ: ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ
ಹಣವಿಲ್ಲ, ಪಕ್ಷದಿಂದ ಸೂಕ್ತ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಗುಜರಾತ್​ನ ಸೂರತ್​ ಹಾಗೂ ಮಧ್ಯಪ್ರದೇಶದ ಇಂದೋರ್, ಪುರಿ ಕಾಂಗ್ರೆಸ್ ​ಅಭ್ಯರ್ಥಿಗಳು ಇದೇ ರೀತಿಯ ನಾಮಪತ್ರ ಸಲ್ಲಿಸಿದ ನಂತರ ಚುನಾವಣ ಕದನದಿಂದ ಹಿಂದೆ ಸರಿದಿದ್ದರು. ಆ ಪಟ್ಟಿಗೆ ಶಿರೋಮಣಿ ಅಕಾಲಿದಳ ಸೇರ್ಪಡೆಗೊಂಡಿದೆ.
ಚಂಡೀಗಢದ ಶಿರೋಮಣಿ ಅಕಾಲಿದಳ ಲೋಕಸಭಾ ಅಭ್ಯರ್ಥಿ ಹರ್ದೀಪ್ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್, ಪಕ್ಷದಿಂದ ಯಾವುದೇ ಬೆಂಬಲ ಸಿಗದ ಕಾರಣ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಣದ ಕೊರತೆ ಎದುರಿಸುತ್ತಿರುವ ಕಾರಣ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಬುಟರ್ಲಾ ನಿವಾಸಿ ಮತ್ತು ಮೂರು ಬಾರಿ ಕೌನ್ಸಿಲರ್ ಆಗಿರುವ 41 ವರ್ಷದ ಹರ್ದಿಯೊ ಸಿಂಗ್ ಅವರು ಬಿಜೆಪಿಯ ಸಂಜಯ್ ಟಂಡನ್ ಮತ್ತು ಕಾಂಗ್ರೆಸ್‌ನ ಮನೀಶ್ ತಿವಾರಿ ವಿರುದ್ಧ ಸ್ಪರ್ಧಿಸಿದ್ದರು.
ಪಕ್ಷದ ಚಂಡೀಗಢ ಘಟಕದ ಅಧ್ಯಕ್ಷರಾಗಿರುವ ಸೈನಿ ಅವರು ತಮ್ಮ ಬದಲಿಗೆ ಇತರರಿಗೆ ಟಿಕೆಟ್ ನೀಡುವಂತೆ ಕೇಳಿಕೊಂಡಿದ್ದಾರೆ. ಮೂಲಗಳ ಪ್ರಕಾರ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿ ಅಂತಿಮ ಹಂತದ ಅಂಗವಾಗಿ ಜೂನ್ 1 ರಂದು ಮತದಾನ ನಡೆಯಲಿದೆ.
ಇವಿಎಂ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಾ..

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:two × two =
Remember me
