ಆಗ್ರಾ(ಉತ್ತರ ಪ್ರದೇಶ):ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಮತ್ತು ಸಮಾಜವಾದಿ ಪಕ್ಷ ಸೀಟು ಹಂಚಿಕೆ ಮಾಡಿಕೊಂಡ ನಂತರ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಪಾಲ್ಗೊಂಡರು.
ಇದನ್ನೂ ಓದಿ:ಹಲ್ದ್ವಾನಿ ಹಿಂಸಾಚಾರ: 10 ದಿನ ಪೊಲೀಸ್ ಕಸ್ಟಡಿಗೆ ಮಾಸ್ಟರ್​ ಮೈಂಡ್​ ಅಬ್ದುಲ್ ಮಲಿಕ್‌
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಬ್ಬರು ನಾಯಕರು ಯಾತ್ರೆಯಲ್ಲಿ ನೆರೆದಿದ್ದ ಜನಸಮೂಹದತ್ತ ಕೈಬೀಸುತ್ತಿದ್ದಂತೆ ಎಸ್‌ಪಿ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೈಕಾರ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್​, ‘ರೈತರು ಸರ್ಕಾರದ ವಿರುದ್ಧ ನಿಂತಿದ್ದಾರೆ, ಸರ್ಕಾರ ರೈತರ ಶಕ್ತಿಗೆ ಹೆದರುತ್ತಿದೆ. ಬಿಜೆಪಿಯನ್ನು ಈ ಬಾರಿ ಸೋಲಿಸಲಾಗುವುದು, ಅಷ್ಟೇ ಅಲ್ಲ, ಮುಂದೆ ಬರುವ INDIA ಸಮ್ಮಿಶ್ರ ಸರ್ಕಾರವು ರೈತರಿಗೆ ಗೌರವವನ್ನು ನೀಡುತ್ತದೆ. ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಬೇಕಾದ ಗೌರವವನ್ನು ಬಿಜೆಪಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಪ್ರದೀಪ್ ಮಾಥೂರ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಆಗ್ರಾದ ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು.
‘ಸ್ಕೂಲ್​ ಮಕ್ಕಳಿಗೆ ಲೈಂಗಿಕ ಸಂಭೋಗ ನಿಷೇಧಿಸಿ’: ಪರೀಕ್ಷೆ ಬದಲು ಡೇಟಿಂಗ್ ವಿರೋಧಿ ಮಸೂದೆಗೆ ಪ್ರತಿಕ್ರಿಯಿಸಿ ಕಂಗನಾ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 9 =
Remember me
