ಲಖನೌ:ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುರುವಾರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ನಾಯಕರಾದ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಅಖಿಲೇಶ್​ ಯಾದವ್​ ಭೇಟಿ ಬಳಿಕ ಮಾತನಾಡಿದ ನಿಖಿಲ್​ ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕೇಂದ್ರ ಸರ್ಕಾರದವರು ಅಕ್ಕಿ ಕೊಡುತ್ತೇವೆಂದು ಭರವಸೆ ನೀಡಿ ಈಗ ಉಲ್ಟಾ ಹೊಡೆದಿದ್ದಾರೆ: ಕೆ.ಎಚ್​. ಮುನಿಯಪ್ಪ
ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು.
ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ಭೇಟಿ ಬಳಿಕ ನಿಖಿಲ್​ ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + twelve =
Remember me
