ಲಖನೌ:ಮಧ್ಯಪ್ರದೇಶ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರಚಾಗಿ ಕಾಂಗ್ರೆಸ್​ನೊಂದಿಗೆ ಮುನಿಸಿಕೊಂಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈಗ ಮತ್ತೊಮ್ಮೆ ಹೊಸದಾಗಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅಖಿಲೇಶ್​ ಪಿಡಿಎ ಎಂಬ ಪದವನ್ನು ಬಳಸಿ ಕಾಂಗ್ರೆಸ್​ ವಿರುದ್ಧದ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಈ ಮೂಲಕ ಚುನಾವಣೆಗೂ ಮುನ್ನವೇ ವಿಪಕ್ಷಗಳ ಒಕ್ಕೂಟ ಇಂಡಿಯಾದಲ್ಲಿ ಅಸಮಾಧಾನದ ಕಟ್ಟೆ ಹೊಡೆದುಕೊಂಡಿದೆ.
2024ರಲ್ಲಿ ಸಮಾಜವಾದಿ ಪಕ್ಷದ ಗೆಲವುವನ್ನು ಪಿಡಿಎ ಖಚಿತಪಡಿಸುತ್ತದೆ. ಅಖಿಲೇಶ್​ ಐಆದವ್ ಬಡವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳುತ್ತಾರೆ ಎಂದು ಪಕ್ಷದ ಕಾರ್ಯಕರ್ತನೋರ್ವ ತನ್ನ ಬೆನ್ನಿನ ಮೇಲೆ ಬರೆಸಿಕೊಂಡಿರುವ ಪೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.
होगा 24 का चुनावPDA का इंक़लाबpic.twitter.com/K7RUPKPxl6
ಇದನ್ನೂ ಓದಿ:ಮಧ್ಯಪ್ರದೇಶ ಚುನಾವಣೆ| ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ಹಲವು ಶಾಸಕರಿಗೆ ಟಿಕೆಟ್​ ನಿರಾಕರಣೆ
ಪಿಡಿಎ ಎಂದರೆ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಎಂದರ್ಥ. ಅಖಿಲೇಶ್​ ಯಾದವ್​ ತಮ್ಮ ಪಕ್ಷವು ಪಿಡಿಎ ಮೇಲೆ ಹೆಚ್ಚಿನ ಕಾರ್ಯತಂತ್ರವನ್ನು ಕೇಂದ್ರಿಕರಿಸುವುದಾಗಿ ಪುನರುಚ್ಚರಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಪಿಡಿಎ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವನ್ನು ಸೋಲಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರಚಾಗಿ ಕಾಂಗ್ರೆಸ್​ನೊಂದಿಗೆ ಮುನಿಸಿಕೊಂಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡು ಆಡಳಿತರೂಢ ಬಿಜೆಪಿ ಸರ್ಕಾರವನ್ನು ಕೆಳಗಿಳಿಸುವ ಬಗ್ಗೆ ಚಿಂತನೆ ನಡೆಸಿದ್ದರು. ಆದರೆ, ಅಖಿಲೇಶ್​ ಲೆಕ್ಕಾಚಾರ ಹಾಕಿಕೊಂಡಂತೆ ಏನು ನಡೆಯಲಿಲ್ಲ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್​ ತಮಗೆ ಮೋಸ ಮಾಡಿದೆ ಎಂದು ಅಖಿಲೇಶ್​ ಯಾದವ್​ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + five =
Remember me
