
ನವದೆಹಲಿ:ನಿರ್ಭಯಾ ಪ್ರಕರಣದ ಅಪರಾಧಿ ವಿನಯ್​ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ತಿರಸ್ಕರಿಸಿದ ಬೆನ್ನಲ್ಲೇ ಇನ್ನೋರ್ವ ಅಪರಾಧಿ ಅಕ್ಷಯ್​ ಠಾಕೂರ್​ ಸಿಂಗ್​ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ.
ಅಕ್ಷಯ್​ ಠಾಕೂರ್​ ಸಿಂಗ್​ ಈ ಹಿಂದೆ ಸುಪ್ರೀಂ ಕೋರ್ಟ್​ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದ. ಆದರೆ ಆ ಪತ್ರವನನ್ನು ನಿನ್ನೆ ಸಂಜೆ ಸುಪ್ರೀಂ ಕೋರ್ಟ್​ ತಿರಸ್ಕರಿಸಿತ್ತು. ಇದೀಗ ಅಪರಾಧಿ ರಾಷ್ಟ್ರಪತಿಗಳ ಮೊರೆ ಹೋಗಿದ್ದಾನೆ.
ಈ ಹಿಂದೆ ನೀಡಿದ್ದ ಆದೇಶದ ಪ್ರಕಾರ ಇಂದು (ಫೆ.1) ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕಿತ್ತು. ಆದರೆ ಗಲ್ಲು ಶಿಕ್ಷೆಯನ್ನು ತಡೆಯಬೇಕು ಎಂದು ವಕೀಲ ಎ.ಪಿ.ಸಿಂಗ್ ದೆಹಲಿಯ ಪಟಿಯಾಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಪರಾಧಿ ವಿನಯ್​ ಶರ್ಮಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಪತ್ರ ಬರೆದಿದ್ದರಿಂದಾಗಿ ಶಿಕ್ಷೆಯನ್ನು ತಡೆಹಿಡಿಯಲಾಗಿತ್ತು. ಇಂದು ಮುಂಜಾನೆ ರಾಷ್ಟ್ರಪತಿಗಳು ವಿನಯ್​ ಶರ್ಮಾ ಸಲ್ಲಿಸಿದ್ದ ಕ್ಷಮಾಧಾನ ಪತ್ರವನ್ನು ವಜಾ ಮಾಡಿದ್ದರು. ಅದರ ಬೆನ್ನಲ್ಲೇ ಇದೀಗ ಅಕ್ಷಯ್​ ಠಾಕೂರ್​ ಕೂಡ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 3 =
Remember me
