ಲಖನೌ:ತನ್ನ ಹೆಸರಿಗೆ ಆಸ್ತಿ ಬರೆಯಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯ ಶಿರಚ್ಛೇದ ಮಾಡಿ ರುಂಡದ ಸಮೇತ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಸೀತಾಪುರ ಜಿಲ್ಲೆಯ ತಾಳಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಮೇಜಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಮಲಾ ದೇವಿ (65) ಎಂದು ಗುರುತಿಸಲಾಗಿದ್ದು, ಘಟನೆ ಬಳಿಕ ಆರೋಪಿ ದಿನೇಶ್​ ಪಾಸಿ (35) ತಲೆಮಾರಿಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಿದ್ದಾರೆ.
आरोपी को पुलिस हिरासत में लेकर पूछताछ की जा रही है।pic.twitter.com/xzyB7qftUc
ಇದನ್ನೂ ಓದಿ:ಲಿವ್​-ಇನ್​-ರಿಲೇಷನ್​ಶಿಪ್​ ಅಪಾಯಕಾರಿ ಕಡಿವಾಣ ಹೇರಲು ಕಠಿಣ ಕಾನೂನು ಜಾರಿಗೊಳಿಸಬೇಕು: ಬಿಜೆಪಿ ಸಂಸದ
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಚಕ್ರೇಶ್​ ಮಿಶ್ರಾ ಆರೋಪಿ ದಿನೇಶ್​ ಪಾಸಿ ಮದ್ಯವ್ಯಸನಿಯಾಗಿದ್ದು, ಪ್ರತಿನಿತ್ಯ ತನ್ನ ತಾಯಿಯೊಂದಿಗೆ ಆಸ್ತಿ ವಿಚಾರವಾಗಿ ಜಗಳವಾಡುತ್ತಿದ್ದ. ಶನಿವಾರ ಸಂಜೆ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆತ ಕೃಷಿ ಬ್ಲೇಡ್​ನಿಂದ ತನ್ನ ತಾಯಿಯ ತಲೆ ಕಡಿದಿದ್ದಾನೆ.
ಕೊಲೆ ಮಾಡಿದ ಆರೋಪಿ ತನ್ನ ತಾಯಿಯ ರುಂಡದ ಸಮೇತ ಪರಾರಿಯಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಚಕ್ರೇಶ್​ ಮಿಶ್ರಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
