ಲಖನೌ:ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಭಾನುವಾರದಂದು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕೊಲೆಯಾದವ ಹಳೆಯ ಒಂದು ಕೊಲೆ ಪ್ರಕರಣದ ಪಿತೂರಿ ಮಾಡಿದ್ದ ಎನ್ನುವ ಆರೋಪವಿದ್ದು, ಅದೇ ದ್ವೇಷದಿಂದ ಆತನ ಕೊಲೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ:ಹೆಚ್ಚಿನ ಅಂಕ ಪಡೆಯಲು ವಿದ್ಯಾರ್ಥಿ, ಶಿಕ್ಷಕಿಗೆ ಮಾಡಿದ ಬ್ಲ್ಯಾಕ್‌ಮೇಲ್ ಏನು ಗೊತ್ತಾ..?
ಆತಿಫ್​ ಕೊಲೆಯಾಗಿರುವ ವ್ಯಕ್ತಿ. ವಿವಿಯಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ. ಭಾನುವಾರದಂದು ಸ್ನೇಹಿತ ಝೈದ್​ನ ಜತೆ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಝೈದ್​ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬೈಕ್​ನಲ್ಲಿ ಮನೆಗೆ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಹಣ ಕದ್ದು ರಾಜಕಾರಣಿ ಆಗಲೊರಟಿದ್ದ ಭೂಪ! ಕದ್ದ ಹಣದಲ್ಲೇ ಉಚಿತ ಶಿಬಿರಗಳನ್ನು ಮಾಡುತ್ತಿದ್ದ!
ಆತಿಫ್​ 2018ರಲ್ಲಿ ಜಮಲ್ಪುರ್ ಪ್ರದೇಶದಲ್ಲಿ ನಡೆದಿದ್ದ ಶಾಬಾಜ್ ಎಂಬ ವ್ಯಕ್ತಿಯ ಹತ್ಯೆಯಲ್ಲಿ ಪಿತೂರಿ ನಡೆಸಿದ್ದ ಆರೋಪವಿದೆ ಎಂದು ಸರ್ಕಲ್ ಆಫೀಸರ್ ಅನಿಲ್ ಸಮನಿಯಾ ತಿಳಿಸಿದ್ದಾರೆ. ಆತನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಹತ್ಯೆಯನ್ನು ಖಂಡಿಸಿ ಎಎಂಯು ವಿದ್ಯಾರ್ಥಿಗಳು ಜೆ.ಎನ್ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. (ಏಜೆನ್ಸೀಸ್​)
ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?

ಬೇಡ ಎಂದು ಎಸೆದಿದ್ದ ಮೊಬೈಲ್​ ಕವರ್​ಗೆ​ ಸಿಕ್ತು 1.19 ಕೋಟಿ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fifteen =
Remember me
