ಡೆಹ್ರಾಡೂನ್ :ಕೇಂದ್ರ ಸರ್ಕಾರವು ಮೇ 1 ರಿಂದ ಲಸಿಕೆ ಉತ್ಪಾದಕರಿಂದ ನೇರವಾಗಿ ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳು ಹಣ ನೀಡಿ ಲಸಿಕೆಗಳನ್ನು ಖರೀದಿಸುವ ಅವಕಾಶ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಈಗ ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಲಸಿಕೆಗಳನ್ನು ವಿನಿಯೋಗಿಸುವ ಮಾರ್ಗಗಳನ್ನು ರೂಪಿಸಬೇಕಿದೆ.
ಕೇಂದ್ರ ಸರಕಾರದ ಆದೇಶದಲ್ಲಿ ಸರಕಾರಿ ಲಸಿಕಾ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಉಚಿತವಾಗಿ ಲಸಿಕೆ ನೀಡುವ ನಿರ್ದೇಶನವಿದೆ. ಆದರೆ ಉತ್ತರಾಖಂಡದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲೂ ಉಚಿತವಾಗಿ ಕರೊನಾ ಲಸಿಕೆ ನೀಡಲಾಗುವುದು ಎಂದು ರಾಜ್ಯದ ಸಿಎಂ ತೀರಥ್ ಸಿಂಗ್ ರಾವತ್ ಘೋಷಿಸಿದ್ದಾರೆ.
ಸುಮಾರು 1 ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಉತ್ತರಾಖಂಡದಲ್ಲಿ ಇಂದು 4,339 ಹೊಸ ಕರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 1,179 ಜನ ಗುಣಮುಖರಾಗಿದ್ದರೆ, 49 ಜನ ಸಾವನ್ನಪ್ಪಿದ್ದಾರೆ. ಒಟ್ಟು 29,949 ಸಕ್ರಿಯ ಪ್ರಕರಣಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.(ಏಜೆನ್ಸೀಸ್)
ಚಿಕ್ಕ ವಯಸ್ಸಿನಲ್ಲೇ ಮರೆಯಾದ ನಟ ಅಮಿತ್ ಮಿಸ್ತ್ರಿ

ಮದುವೆ ನಿಶ್ಚಯ ಮಾಡಿ ಹಿಂತಿರುಗುತ್ತಿದ್ದರು… ಸೇತುವೆ ದಾಟುವಾಗ ನಡೆಯಿತು ದುರಂತ !

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × 2 =
Remember me
