ನವದೆಹಲಿ:ಸೋಶಿಯಲ್​ ಮೀಡಿಯಾದಲ್ಲಿ ನಿನ್ನೆಯಿಂದ ಒಂದು ಪೋಸ್ಟ್​ ಸಖತ್​ ಸುದ್ದಿ ಮಾಡುತ್ತಿದೆ. ಹಲವಾರು ಮಂದಿಯ ಇನ್​ಸ್ಟಾಗ್ರಾಮ್​​ ಖಾತೆಗಳಲ್ಲಿ ‘ಆಲ್ ಐಸ್ ಆನ್ ರಫಾ’ (All Eyes on Rafah) ಎಂಬ ಶೀರ್ಷಿಕೆಯೊಂದಿಗೆ ಚಿತ್ರ ಕಾಣಿಸಿಕೊಂಡಿದೆ. ಇದು ಏನು? ಯಾಕೆ ಈ ಪೋಸ್ಟ್​ ಇಷ್ಟೊಂದು ವೈರಲ್​​ ಆಗುತ್ತಿದೆ ಎನ್ನುವ ಕುರಿತಾಗಿ ಮಾಹಿತಿ ತಿಳಿದುಕೊಳ್ಳೋಣ…
ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಇಸ್ರೇಲ್ ನಡೆಸುತ್ತಿರುವ ವಾಯು ದಾಳಿಯ ವಿರುದ್ಧ ಜಗತ್ತಿನಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇದೀಗ ವಿಶ್ವಾದ್ಯಂತ ‘All eyes on Rafah’ ಅಭಿಯಾನವು ತೀವ್ರ ಸ್ವರೂಪ ಪಡೆದುಕೊಂಡಿದೆ.
ಆಲ್ ಐಸ್ ಆನ್ ರಫಾ ಗಾಝಾದ ದಕ್ಷಿಣದಲ್ಲಿರುವ ರಾಫಾ ನಗರದ ನಿರಾಶ್ರಿತರ ಶಿಬಿರದಲ್ಲಿರುವ ಡೇರೆಗಳನ್ನು ತೋರಿಸಿದೆ. ಅಲ್ಲಿ ಇಸ್ರೇಲ್ ನಿಂದ ನಡೆಸಿದ ದಾಳಿಯ ಅನಂತರ ಅನೇಕ ಪ್ಯಾಲೇಸ್ಟಿನಿಯರು ಇಲ್ಲಿಗೆ ಸ್ಥಳಾಂತರಗೊಂಡಿದ್ದಾರೆ. ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ಟೈನ್‌ ಗೆ ಬೆಂಬಲ ಸೂಚಿಸಿ ಅನೇಕರು ಇನ್ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದಾರೆ. ಎಐ ರಚಿತವಾದ ಚಿತ್ರವನ್ನು ಪೋಸ್ಟ್ ಮಾಡಿದ್ದು, ಹಲವಾರು ಟೆಂಟ್ ಮನೆಗಳನ್ನು ಚಿತ್ರದಲ್ಲಿ ಕಾಣಬಹುದಾಗಿದೆ.
ಪ್ಯಾಲೇಸ್ಟಿನಿಯನ್ನರ ವಿರುದ್ಧದ ದಾಳಿಯನ್ನು ಖಂಡಿಸಿ ಮತ್ತು ಕದನ ವಿರಾಮಕ್ಕೆ ಒತ್ತಾಯಿಸಲು ಇದು ಸಾಮಾಜಿಕ ಜಾಲತಾಣದ ಮೂಲಕ ಜನರನ್ನು ಒಗ್ಗೂಡಿಸುತ್ತಿದೆ. ಡಬ್ಲ್ಯೂ ಹೆಚ್ ಒ ಪ್ರತಿನಿಧಿ ರಿಚರ್ಡ್ ಪೀಪರ್‌ಕಾರ್ನ್ ಅವರು ಫೆಬ್ರವರಿಯಲ್ಲಿ ಮೊದಲು ಈ ಘೋಷಣೆಯನ್ನು ಮಾಡಿದರು. ಡೇರೆ ಶಿಬಿರಗಳಿಂದ ತುಂಬಿದ ಪ್ರದೇಶವನ್ನು ಚಿತ್ರದಲ್ಲಿ ಕಾಣಬಹುದು. ಇದು ಇತ್ತೀಚಿನದು. ಎಲ್ಲರ ಗಮನ ಸೆಳೆಯಲು ಇದು ಅವರ ಪ್ರಯತ್ನ. ಇಸ್ರೇಲ್ ದಾಳಿಯಿಂದ ರಫಾದಲ್ಲಿ ಕನಿಷ್ಠ 45 ನಾಗರಿಕರು ಮೃತಪಟ್ಟಿದ್ದಾರೆ ಎಂದು ಹಲವರು ನೆಟ್ಟಿಗರು ಕಾಮೆಂಟ್ ನಲ್ಲಿ ಹೇಳಿದ್ದಾರೆ.
ಭಾರತೀಯ ನಟರಾದ ಆಲಿಯಾ ಭಟ್, ಪ್ರಿಯಾಂಕಾ ಚೋಪ್ರಾ ಕರೀನಾ ಕಪೂರ್ ಖಾನ್ ಮತ್ತು ವರುಣ್ ಧವನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 7 =
Remember me
