ನವದೆಹಲಿ:ಉದ್ಯೋಗ ಕೋಟಾ ಸಂಬಂಧ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ, ಪ್ರತಿಭಟನೆ ಆ ದೇಶದ ಆಂತರಿಕ ವಿಚಾರ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ: ಬಿ.ವೈ ವಿಜಯೇಂದ್ರ
ಬಾಂಗ್ಲಾದೇಶದಲ್ಲಿ ಪ್ರಸ್ತುತ 8,500 ಸಾವಿರ ವಿದ್ಯಾರ್ಥಿಗಳು, 15,000 ಭಾರತೀಯರು ವಾಸಿಸುತ್ತಿದ್ದಾರೆ. ಎಲ್ಲಾ ಭಾರತೀಯ ಪ್ರಜೆಗಳು “ಸುರಕ್ಷಿತವಾಗಿದ್ದಾರೆ. ಅವರ ಸಹಾಯಕ್ಕೆ ವಿದೇಶಾಂಗ ಇಲಾಖೆಯಿಂದ 24 X 7 ಸಹಾಯವಾಣಿ ತೆರೆಯಲಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರಂಧೀರ್ ಜೈಸ್ವಾಲ್ ಅವರು ಹೇಳಿದ್ದಾರೆ.
ಎಲ್ಲರಿಗೂ ಹೈಕಮಿಷನ್ ಮತ್ತು ನಮ್ಮ ಸಂಪರ್ಕದಲ್ಲಿರಲು ಪ್ರಯಾಣ ಸಲಹೆಯನ್ನು ನೀಡಿದ್ದೇವೆ. ಅವರಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ವಿದೇಶಾಂಗ ಸಚಿವರೇ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಬಾಂಗ್ಲಾದಲ್ಲಿ ನಮ್ಮ ಎಲ್ಲಾ ಪ್ರಜೆಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಶುಕ್ರವಾರವೂ ಮುಂದುವರೆದಿದ್ದು, ದೇಶದ ಹಲವೆಡೆ ಸಂಭವಿಸಿದ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ.
ಬಾಂಗ್ಲಾದೇಶದಲ್ಲಿ ಏನಾಗುತ್ತಿದೆ?:ಬಾಂಗ್ಲಾದೇಶದಲ್ಲಿ ಪ್ರತಿಭಟನೆಯನ್ನು ನಿಯಂತ್ರಿಸಲು ಹಲವೆಡೆ ಮೊಬೈಲ್ ಇಂಟರ್​ನೆಟ್​ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದಿದ್ದಾರೆ. ಅಲ್ಲದೆ ಸಶಸ್ತ್ರ ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ:ಮೀಸಲಾತಿ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಹಲವು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಶುಕ್ರವಾರ ಕೋಲ್ಕತ್ತಾದಲ್ಲಿರುವ ಡೆಪ್ಯುಟಿ ಹೈಕಮೀಷನ್ ಬಳಿ ಪ್ರತಿಭಟನಾ ಮೆರವಣಿಗೆ ನಡೆಸಿವೆ.
ಬಿಜೆಪಿ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗದ್ದಲ ಸೃಷ್ಟಿ: ಡಿಸಿಎಂ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − twelve =
Remember me
