ಪಟ್ನಾ:ಕರೊನಾ ಸೋಂಕು ಇಳಿಕೆಯ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಸಂಪೂರ್ಣ ಅನ್​ಲಾಕ್​ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಅಲ್ಲಿನ ಸಿಎಂ ನಿತೀಶ್​ ಕುಮಾರ್​ ಇಂದು ಘೋಷಿಸಿದ್ದಾರೆ.
ಎಲ್ಲಾ ಅಂಗಡಿಗಳು, ಬಿಸಿನೆಸ್​ಗಳು, ಶಾಪಿಂಗ್​ ಮಾಲ್​, ಪಾರ್ಕ್​ ಮತ್ತು ಉದ್ಯಾನಗಳು, ಧಾರ್ಮಿಕ ಸ್ಥಳಗಳು ಮತ್ತು ಇತರ ಸೌಲಭ್ಯಗಳು ಸಹಜವಾಗಿ ಕಾರ್ಯ ನಿರ್ವಹಿಸಬಹುದು. ಜೊತೆಗೇ ರಾಜ್ಯಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳು ಪುನರಾರಂಭಗೊಳ್ಳಬಹುದು. ವಿಶ್ವವಿದ್ಯಾಲಯಗಳು, ಕಾಲೇಜುಗಳು, 1 ರಿಂದ 12 ನೇ ತರಗತಿವರೆಗಿನ ಶಾಲಾ ಕಾಲೇಜುಗಳು, ಕೋಚಿಂಗ್ ಕೇಂದ್ರಗಳು ತೆರೆಯಲಿದ್ದು, ಯಾವುದೇ ಪರೀಕ್ಷೆ ನಡೆಸಲು ಕೂಡ ಮುಕ್ತ ಅವಕಾಶವಿದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ:ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್​ ರೇಪ್​
ಆಯಾ ಜಿಲ್ಲಾಡಳಿತದ ಅನುಮತಿ ಪಡೆದು, ಕೋವಿಡ್​ ಮಾರ್ಗಸೂಚಿಗಳನ್ನು ಪಾಲಿನೆಯೊಂದಿಗೆ ಯಾವುದೇ ಸಾಮಾಜಿಕ, ರಾಜಕೀಯ, ಮನೋರಂಜನಾ, ಕ್ರೀಡಾ ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಹುದು. ಸಿನಿಮಾ ಹಾಲ್, ಕ್ಲಬ್, ಜಿಮ್, ಸ್ವಿಮ್ಮಿಂಗ್​ ಪೂಲ್​ ಮತ್ತು ರೆಸ್ಟೊರೆಂಟ್​ಗಳು ಶೇ. 50 ರಷ್ಟು ಸಾಮರ್ಥ್ಯದಲ್ಲಿ ತೆರೆಯಬಹುದು ಎನ್ನಲಾಗಿದೆ.(ಏಜೆನ್ಸೀಸ್)
ಇಂಧನ ಬೆಲೆ: ಮುಂಬರುವ ತಿಂಗಳಲ್ಲಿ ಕೊಂಚ ಪರಿಹಾರ ಎಂದ ಕೇಂದ್ರ ಸಚಿವ

ಡ್ರಗ್ಸ್​​ ಸೇವನೆ ಖಚಿತವಾದ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
