ನವದೆಹಲಿ:ದಿನದಿಂದ ದಿನಕ್ಕೆ ಕರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್​ 31ರವರೆಗೆ ದೇಶಾದ್ಯಂತ ಎಲ್ಲ ಪ್ಯಾಸೆಂಜರ್​ ರೈಲು ಪ್ರಯಾಣವನ್ನು ಭಾರತೀಯ ರೈಲ್ವೆ ಇಲಾಖೆ ರದ್ದುಪಡಿಸಿದೆ.
ಇಂದು ದೇಶದೆಲ್ಲೆಡೆ ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಪ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ, ದುರಾದೃಷ್ಟವಶಾತ್​ ಇಂದು ಇಬ್ಬರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆಯು ಹೆಚ್ಚಾಗಿರುವ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಚ್​ 31ರವರೆಗೆ ಎಲ್ಲ ಪ್ಯಾಸೆಂಜರ್​ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ.
ದೇಶದಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 7 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.(ಏಜೆನ್ಸೀಸ್​)
PHOTOS| ಕರೊನಾ ಸೋಂಕು ತಗುಲದಂತೆ ಏನು ಮಾಡಬೇಕು? ಮಾಡಬಾರದು?: ಉಪಯುಕ್ತ ಮಾಹಿತಿ ಫೋಟೋಗಳಲ್ಲಿ…

ಶಾಹೀನ್​ ಭಾಗ್​ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಅವಘಡ; ಪೊಲೀಸ್​ ಬಿಗಿ ಭದ್ರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
