ಪ್ರಯಾಗ್​ರಾಜ್:ಶ್ರೀಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಾಣವಾಗಿದೆ ಎನ್ನಲಾದ ಶಾಹಿ ಈದ್ಗಾ ಮಸೀದಿಯ ಸರ್ವೇ ನಡೆಸಲು ಅಲಹಾಬಾದ್​ ಹೈಕೋರ್ಟ್​ ಗುರುವಾರ ಅನುಮತಿ ನೀಡಿದೆ.
ಮಸೀದಿಯ ಜಾಗ ಪರಿಶೀಲಿಸಲು ಆಯುಕ್ತರನ್ನು ನೇಮಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಯಾಂಕ್​ ಕುಮಾರ್​ ಜೈನ್​ ಅವರಿದ್ದ ಏಕಸದಸ್ಯ ಪೀಠವು ಮೂವರು ಅಧಿಕಾರಿಗಳಿರುವ ಆಯೋಗ ರಚಿಸುವಂತೆ ಸೂಚಿಸಿ ಆದೇಶ ಹೊರಡಿಸಿದೆ.
17ನೇ ಶತಮಾನದಲ್ಲಿ ನಿರ್ಮಿಸಲಾದ ಮಸೀದಿ ಇರುವ ಜಾಗ ಒಂದು ಕಾಲದಲ್ಲಿ ಶ್ರೀಕೃಷ್ಣ ಜನ್ಮಭೂಮಿಯಾಗಿತ್ತು ಎಂಬ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಅಡ್ವೊಕೇಟ್ ಕಮಿಷನರ್‌ ಅವರ ಮೇಲ್ವಿಚಾರಣೆಯಲ್ಲಿ ಮಸೀದಿ ಜಾಗದಲ್ಲಿ ಸರ್ವೆ ನಡೆಸುವಂತೆ ಸೂಚಿಸಿತು. ಶ್ರೀ ಕೃಷ್ಣನ ಜನ್ಮಸ್ಥಳವು ಮಸೀದಿಯ ಕೆಳಗೆ ಇದೆ ಮತ್ತು ಮಸೀದಿಯು ಹಿಂದೂ ದೇವಾಲಯವಾಗಿದೆ ಎಂದು ತೋರಿಸುವ ಹಲವು ಚಿಹ್ನೆಗಳು ಇವೆ. ಹೀಗಾಗಿ ಮಸೀದಿಯನ್ನು ಪರಿಶೀಲಿಸಲು ಆಯೋಗವನ್ನು ಸ್ಥಾಪಿಸಬೇಕು ಎಂದು ಅರ್ಜಿದಾರರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಕ್ಲಬ್​ ಉದ್ಘಾಟನೆಗೆಂದು ತೆರಳಿದ್ದ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ; ಅಸಲಿಗೆ ನಡೆದಿದ್ದಾರೇನು?
ಹಿಂದೂ ದೇವಾಲಯಗಳ ವಿಶಿಷ್ಟ ಲಕ್ಷಣವಾಗಿರುವ ಕಮಲದ ಆಕಾರದ ಸ್ತಂಭವು ಅಸ್ತಿತ್ವದಲ್ಲಿದೆ. ಕೃಷ್ಣ ಜನಿಸಿದ ರಾತ್ರಿ ಆತನನ್ನು ರಕ್ಷಿಸಿದ ಹಿಂದೂ ದೇವತೆಗಳಲ್ಲಿ ಒಬ್ಬನಾದ ಶೇಷನಾಗನ ಚಿತ್ರವೂ ಇದೆ. ಮಸೀದಿಯ ಕಂಬದ ತಳದಲ್ಲಿ ಹಿಂದೂ ಧಾರ್ಮಿಕ ಚಿಹ್ನೆಗಳು ಮತ್ತು ಕೆತ್ತನೆಗಳು ಸಹ ಗೋಚರಿಸುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ. ಈ ಜಾಗದ ಸಂಪೂರ್ಣ ಹಕ್ಕು ಭಗವಾನ್ ಶ್ರೀಕೃಷ್ಣ ವಿರಾಜಮಾನರಿಗೆ ನೀಡಬೇಕು. ಹೀಗಾಗಿ ಶಾಹಿ ಈದ್ಗಾ ಮಸೀದಿಯನ್ನು ತೆರವು ಮಾಡಿ ಮಂದಿರಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಅರ್ಜಿದಾರರು ಕೋರ್ಟ್‌ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
