ನವದೆಹಲಿ:ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇರೆಗೆ ಆಲ್ಟ್​​ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್​ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹಳೇ ಕೇಸೊಂದರ ವಿಚಾರಣೆಗಾಗಿ ಕರೆಸಿದ್ದ ಪೊಲೀಸರು ಬಳಿಕ ಬಂಧಿಸಿದ್ದರು.
ದೆಹಲಿಯ ವಿಶೇಷ ದಳದ ಪೊಲೀಸರು 2022ರ ಕೇಸ್​ವೊಂದಕ್ಕೆ ಸಂಬಂಧಿಸಿದಂತೆ ಜುಬೇರ್​ನನ್ನು ವಿಚಾರಣೆಗೆ ಕರೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸದ ಹಾಗೆ ಹೈಕೋರ್ಟ್​ನಿಂದ ಸೂಚನೆ ಪಡೆದಿದ್ದಾಗ್ಯೂ ಜುಬೇರ್ ಬಂಧನವಾಗಿದೆ. ಅಂದರೆ, ಬೇರೆ ಕೇಸೊಂದರ ಎಫ್​ಐಆರ್ ಮೇರೆಗೆ ಪೊಲೀಸರು ಬಂಧಿಸಿದ್ದಾಗಿ ಹೇಳಿದ್ದಾರೆಂದು ಆಲ್ಟ್​ ನ್ಯೂಸ್​ನ ಇನ್ನೊಬ್ಬ ಸಹ ಸಂಸ್ಥಾಪಕ ಪ್ರತೀಕ್ ಸಿನ್ಹಾ ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆ ಬಳಿಕ ಜುಬೇರ್​ನನ್ನು ಗುಪ್ತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಎಲ್ಲಿಗೆ ಎಂದು ಜುಬೇರ್​ ವಕೀಲರಿಗೆ ಅಥವಾ ನನಗೂ ಮಾಹಿತಿ ನೀಡಿಲ್ಲ ಎಂದು ಸಿನ್ಹಾ ಹೇಳಿಕೊಂಡಿದ್ದಾರೆ. ಇನ್ನೊಂದೆಡೆ 2022ರಲ್ಲಿ ಜುಬೇರ್ ಮಾಡಿದ್ದ ಟ್ವೀಟ್​, ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಟ್ವಿಟರ್​ ಬಳಕೆದಾರರು ನೀಡಿದ್ದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಡಿಸಿಪಿ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.
https://twitter.com/balajikijaiin/status/1538574828084817920?t=Zeda24UFe1WzA_SUZsFVjQ&s=08
ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
