ಗುಂಟೂರು:ಜನಸೇನಾ ಪಕ್ಷದ ಅಧ್ಯಕ್ಷ ಪವನ್​ ಕಲ್ಯಾಣ್​ ಅವರನ್ನು ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಅವರು ಜನಸೇನಾ ಪಕ್ಷದ ಮಂಗಳಗಿರಿ ಕಚೇರಿಯಲ್ಲಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಅವನನ್ನು ಕೊಲ್ಲಲಿಲ್ಲ, ನಾನು ಎಚ್ಚರವಾದಾಗ ಮಗು ಸತ್ತಿತ್ತು: ಪೊಲೀಸರ ಮುಂದೆ ಬೆಂಗಳೂರಿನ ಸಿಇಒ ಹೇಳಿಕೆ
ಪವನ್​ ಕಲ್ಯಾಣ್​ ಭೇಟಿ ಮಾಡಿದ ರಾಯುಡು ಅರ್ಧ ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆಸಿದ್ದಾರೆ. ಜನಸೇನಾ ಪಕ್ಷ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಆಂಧ್ರಪ್ರದೇಶದ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೇರಿ ರಾಜೀನಾಮೆ ನೀಡಿದ್ದ ಅಂಬಾಟಿ ರಾಯುಡು ದಿಢೀರ್​ ಪವನ್​​ ಕಲ್ಯಾಣ್​ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತೊರೆಯುತ್ತಿದ್ದು ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ನಿರ್ಧರಿಸಿದ್ದೇನೆ ಎಂಬುದಾಗಿ ರಾಯುಡು ಎಕ್ಸ್​ ಮೂಲಕ ಹೇಳಿದ್ದರು. ಮುಂದಿನ ನಡೆ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ಆಂಧ್ರಪ್ರದೇಶ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಟಿಡಿಪಿ ಮತ್ತು ಜನಸೇನಾ ಒಳಗೊಂಡ ಮಹಾ ಮೈತ್ರಿ ರಚಿಸಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್​ ಪಕ್ಷದ ವಿರುದ್ಧ ಹೋರಾಡಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − ten =
Remember me
