ಪಂಜಾಬ್:ರಾಜ್ಯದಲ್ಲಿ ಕಳ್ಳಭಟ್ಟಿ ಸಾರಾಯಿಯಿಂದ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಭಾನುವಾರ 98ಕ್ಕೆ ಏರಿಕೆಯಾಗಿದೆ.
ಇನ್ನು ವಿಷಪೂರಿತ ಮದ್ಯದ ದಂಧೆಗೆ ಮಹಿಳೆಯೇ ಕಿಂಗ್​ಪಿನ್ ಎನ್ನಲಾಗಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ ಎಂದು ಹೇಳಲಾಗುತ್ತಿದೆ.
ಪ್ರತಿದಿನವೂ ವಿಷಪೂರಿತ ಮದ್ಯ ಸೇವಿಸಿ ಪಂಜಾಬ್​​ನಲ್ಲಿ ಜನರು ಸಾಯುತ್ತಿರುವುದನ್ನು ನೋಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಹೇಳಿದ್ದರು.ಆದರೆ ಇದಕ್ಕೆ ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಅವರು ತೀವ್ರ ಕಿಡಿಕಾರಿದ್ದಾರೆ. ನೀವು ನಿಮ್ಮ ಕೆಲಸ ನೋಡಿಕೊಳ್ಳಿ ಸಾಕು ಎಂದು ಅರವಿಂದ್​ ಕೇಜ್ರಿವಾಲ್​ಗೆ ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ:VIDEO: ಪಾಕಿಸ್ತಾನದ ಪ್ರಮುಖ ನ್ಯೂಸ್​ ಚಾನಲ್​ನಲ್ಲಿ ನಳನಳಿಸಿದ ಭಾರತದ ಧ್ವಜ; ವೀಕ್ಷಕರು, ಮಾಧ್ಯಮ ಸಿಬ್ಬಂದಿ ಶಾಕ್​​
ಪಂಜಾಬ್​ನ ಮದ್ಯ ದುರಂತವನ್ನು ಅರವಿಂದ್​ ಕೇಜ್ರಿವಾಲ್​ ಅವರು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇಲ್ಲಿ ನಿಷ್ಕ್ರಿಯವಾಗಿರುವ ಆಮ್ ಆದ್ಮಿ ಪಕ್ಷವನ್ನು ಮತ್ತೆ ಪುನರುಜ್ಜೀವನಗೊಳಿಸಲು ಈ ವಿಚಾರವನ್ನು ಅಸ್ತ್ರವನ್ನಾಗಿ ಪ್ರಯೋಗ ಮಾಡುತ್ತಿದ್ದಾರೆ. ಇಲ್ಲಿನ ದುರಂತವನ್ನು ರಾಜಕೀಯಗೊಳಿಸಲು ನಿಮಗೆ ನಾಚಿಕೆ ಆಗುತ್ತಿಲ್ಲವಾ ಎಂದು ಪ್ರಶ್ನಿಸಿದ್ದಾರೆ.
ಪಂಜಾಬ್​ನಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ಅಕ್ರಮ ಮದ್ಯಕ್ಕೆ ಸಂಬಂಧಪಟ್ಟ ದುರಂತಗಳು ನಡೆಯುತ್ತಲೇ ಇದ್ದರೂ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಪಂಜಾಬ್​ ಸರ್ಕಾರದ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಅರವಿಂದ್​ ಕೇಜ್ರಿವಾಲ್​ ಹೇಳಿದ್ದರು.(ಏಜೆನ್ಸೀಸ್​)
ನಾಪತ್ತೆಯಾಗಿದ್ದ ವಕೀಲ ಶವವಾಗಿ ಪತ್ತೆ; ಸ್ನೇಹಿತನ ಮೇಲೆ ಅನುಮಾನವಿದ್ದರೂ ಬಂಧಿಸಲಾಗುತ್ತಿಲ್ಲ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 4 =
Remember me
