ನವದೆಹಲಿ:ದೇಶದ ಶ್ರೀಮಂತ ಉದ್ಯಮಿ ಹಾಗೂ ರಿಲಯನ್ಸ್​ ಇಂಡಸ್ಟ್ರೀಸ್​ನ ಚೇರ್ಮನ್​ ಮುಕೇಶ್​ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಅತ್ಯುನ್ನತ ಝಡ್​ ಪ್ಲಸ್​ (Z+) ಭದ್ರತೆ ಒದಗಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನಿರ್ದೇಶಿಸಿದೆ.
ಭಾರತಾದ್ಯಂತ ಮತ್ತು ವಿದೇಶದಲ್ಲೂ ಅಂಬಾನಿ ಕುಟುಂಬಕ್ಕೆ ಭದ್ರತೆ ಒದಗಿಸಲು ಕೋರ್ಟ್​ ಸೂಚನೆ ನೀಡಿದೆ. ಸಂಪೂರ್ಣ ಭದ್ರತಾ ವೆಚ್ಚವನ್ನು ಅಂಬಾನಿ ಅವರೇ ಭರಿಸಬೇಕೆಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂದು ದ್ವಿಸದಸ್ಯ ಪೀಠವು ಸೋಮವಾರ ಈ ನಿರ್ದೇಶನವನ್ನು ಹೊರಡಿಸಿದೆ.
ಇದನ್ನೂ ಓದಿ:ರಾಜ್ಯದ ಜನತೆಗೆ ರೈಲ್ವೇಯಿಂದ ಸಿಹಿಸುದ್ದಿ: ಇಲ್ಲೆಲ್ಲ ನಿಲ್ಲಲಿವೆ ಈ ರೈಲುಗಳು!
ಮಹಾರಾಷ್ಟ್ರ ಗೃಹ ಸಚಿವಾಲಯಕ್ಕೆ ಅಂಬಾನಿ ಕುಟುಂಬದ ಭದ್ರತಾ ಜವಾಬ್ದಾರಿಯನ್ನು ಕೋರ್ಟ್​ ಹೊರಿಸಿದೆ. ಬೆದರಿಕೆ ಇದ್ದಲ್ಲಿ ತಮ್ಮದೇ ಖರ್ಚಿನಲ್ಲಿ ಭದ್ರತೆಯನ್ನು ಪಡೆಯಬಹುದು ಮತ್ತು ಉಳಿದುಕೊಳ್ಳುವ ಯಾವುದೇ ನಿರ್ಧಿಷ್ಟ ಸ್ಥಳದ ಮೇಲೆ ನಿರ್ಬಂಧ ಹೇರಲಾಗದು ಎಂದು ನ್ಯಾಯಾಲಯ ಹೇಳಿದೆ.
ಮುಕೇಶ್​ ಅಂಬಾನಿ ಪರ ಖ್ಯಾತ ನ್ಯಾಯವಾದಿ ಮುಕುಲ್​ ರೋಹಟಗಿ ಅವರು ವಕಾಲತು ವಹಿಸಿದರು. ಅಂಬಾನಿ ಕುಟುಂಬಕ್ಕೆ ನಿರಂತರ ಬೆದರಿಕೆಗಳು ಬರುತ್ತಿರುವುದನ್ನು ಮುಂಬೈ ಪೊಲೀಸರು, ಕೇಂದ್ರ ಗೃಹ ಸಚಿವಾಲಯ ಮೌಲ್ಯಮಾಪನ ಮಾಡಿದ್ದು, ಇದರ ಆಧಾರದ ಮೇಲೆ ನ್ಯಾಯಾಲಯ ಭದ್ರತೆ ಒದಗಿಸಲು ಸೂಚನೆ ನೀಡಿದೆ.(ಏಜೆನ್ಸೀಸ್​)
ಎಲಾನ್​ ಮಸ್ಕ್ ಮತ್ತೆ ನಂ.1 ಶ್ರೀಮಂತ: ಗೌತಮ್ ಅದಾನಿಗೆ ಎಷ್ಟೇ ಸ್ಥಾನ?

ಬಲವಂತದ ವಿವಾಹ ತಡೆಯಲು ಇಂಗ್ಲೆಂಡ್​ನಲ್ಲಿ 18 ವರ್ಷಕ್ಕೆ ಮದುವೆ

ಹೆಚ್ಚು ಪ್ರೋಟೀನ್ ಆಹಾರ, ಟೀ ಬೇಡ! ಬಿಸಿಗಾಳಿಯಿಂದ ಆರೋಗ್ಯ ರಕ್ಷಣೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಸಲಹೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
