ಹೈದರಾಬಾದ್​:ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್​ ಬಾರದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ತೆಲಂಗಾಣದ ನಿರ್ಮಲ್​ ಜಿಲ್ಲೆಯ ತುಳಸಿಪೇಟೆ ಗ್ರಾಮದಲ್ಲಿ ನಡೆದಿದೆ.
ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ನಿರ್ಮಲ್​ ಜಿಲ್ಲೆ ತುಳಸಿಪೇಟೆ ಗ್ರಾಮದ ಮಹಿಳೆ ಗಂಗಾಮಣಿ ಅವರಿಗೆ ಶುಕ್ರವಾರ ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆ್ಯಂಬುಲೆನ್ಸ್​ಗೆ ಕರೆ ಮಾಡಲಾಗಿದೆ. ಆ್ಯಂಬುಲೆನ್ಸ್​ ಬರುವುದು ತಡವಾಗುತ್ತದೆ ಎಂದು ಅರಿತ ಮಹಿಳೆ ಕುಟುಂಬಸ್ಥರು ನಡೆದುಕೊಂಡು ಹೋಗಿ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ:ಮದುವೆ ಮಾಡಿಸಲಿಲ್ಲವೆಂದು ಹೆತ್ತ ತಾಯಿಯನ್ನೇ ಬರ್ಬರವಾಗಿ ಕೊಂದ ಮಗ
ನಡೆದುಕೊಂಡು ಹೋಗುವ ವೇಳೆ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದ್ದು, ರಸ್ಥೆ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಜನ್ಮ ನೀಡಿದ ಕೆಲ ಘಂಟೆಗಳ ಬಳಿಕ ಸ್ಥಳಕ್ಕೆ ಆಗಮಿಸಿದ ಆ್ಯಂಬುಲೆನ್ಸ್​ ಹಾಗೂ ವೈದ್ಯರ ತಂಡ ತಾಯಿ ಹಾಗೂ ನವಜಾತ ಶಿಶುವನ್ನು ಜಿಲ್ಲಾಸ್ಪತ್ರೆಯಲ್ಲಿರುವ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.
ತಾಯಿ ಹಾಗೂ ಮಗು ಇಬ್ಬರು ಆರೋಗ್ಯಕರವಾಗಿದ್ದು, ಸುರಕ್ಷಿತವಾಗಿದ್ದಾರೆ. ಆ್ಯಂಬುಲೆನ್ಸ್​ ತಡವಾಗಿ ತೆರಳಿದ್ದಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
