ಲಖನೌ:ಯಾವುದೇ ರಾಜಕಾರಣಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಬಾರದು ಎಂದು ವಿರೋಧ ಪಕ್ಷದ ನಾಯಕ ರಾಹುಲ್​ಗಾಂಧಿ ಹೇಳಿದ್ದು ಸರಿ ಎಂದು ಉತ್ತರ ಪ್ರದೇಶದ ಅಮೇಥಿಯ ಸಂಸದ ಕಿಶೋರಿ ಲಾಲ್ ಶರ್ಮಾ ಶನಿವಾರ(ಜುಲೈ 13) ಹೇಳಿದ್ದಾರೆ.
ಇದನ್ನು ಓದಿ:ಶಂಭು ಗಡಿ ಸಂಚಾರಮುಕ್ತಗೊಳಿಸಿ; ಸರ್ಕಾರಕ್ಕೆ ಸುಪ್ರೀಂ ಸೂಚನೆ
ರಾಹುಲ್ ಗಾಂಧಿ ಹೇಳಿದ್ದು ಸರಿ. ನಾನು ಅವರ ಹೇಳಿಕೆಯನ್ನು ಒಪ್ಪುತ್ತೇನೆ. ಗೆಲುವು ಮತ್ತು ಸೋಲುಗಳು ಜೀವನದ ಒಂದು ಭಾಗವಾಗಿದೆ. ರಾಹುಲ್​ಗಾಂಧಿ ಅವರು ಸಾರ್ವಜನಿಕ ಜೀವನದಲ್ಲಿ ಯಾವಾಗಲೂ ಸಭ್ಯತೆಯನ್ನು ಅನುಸರಿಸುತ್ತಾರೆ. ಯಾರೊಬ್ಬರ ವಿರುದ್ಧ ಅಂತಹ ಭಾಷೆಯನ್ನು ಬಳಸುವುದು ನಮ್ಮ ಮೌಲ್ಯಗಳಲ್ಲಿಲ್ಲ. ಅಸಭ್ಯ ಭಾಷೆ ಬಳಸುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಸ್ಮೃತಿ ಇರಾನಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಮಾಡಿದ್ದನ್ನು ಕಂಡು ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಮಾಜಿ ಸಂಸದೆಯನ್ನು ಸಮರ್ಥಿಸಿಕೊಂಡರು. ಜೀವನದಲ್ಲಿ ಸೋಲು ಮತ್ತು ಗೆಲುವು ಎರಡು ಇರುತ್ತದೆ. ಸ್ಮೃತಿ ಇರಾನಿ ಅವರಾಗಲಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಭಾಷೆ ಬಳಸುವುದನ್ನು ಮತ್ತು ಅವರ ವಿರುದ್ಧ ಕೆಟ್ಟದಾಗಿ ವರ್ತಿಸುವುದನ್ನು ನಿಲ್ಲಿಸಬೇಕು. ಅವಮಾನಿಸುವುದು ದೌರ್ಬಲ್ಯದ ಸಂಕೇತವೇ ಹೊರತು ಶಕ್ತಿಯಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡುವ ಮೂಲಕ ಮನವಿ ಮಾಡಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ 1,67,196 ಮತಗಳ ಅಂತರದಿಂದ ಇರಾನಿ ಅವರನ್ನು ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಸೋಲಿಸಿದರು. ಶರ್ಮಾ 5,39,228 ಮತಗಳನ್ನು ಪಡೆದರೆ, ಇರಾನಿ 3,72,032 ಮತಗಳನ್ನು ಗಳಿಸಿದರು. (ಏಜೆನ್ಸೀಸ್​​)
ಜೂನ್​​​ 25ರಂದು ಸಂವಿಧಾನ ಹತ್ಯೆ ದಿನ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 × four =
Remember me
