ನವದೆಹಲಿ:ಆಮೀರ್ ಖಾನ್ ಪುತ್ರಿ ಇರಾ ಖಾನ್, ನೂಪುರ್ ಶಿಖರೆ ಜೊತೆ ಬಹಳ ಸಮಯದಿಂದ ಡೇಟಿಂಗ್ ನಡೆಸುತ್ತಿದ್ದರು. ಅಂತಿಮವಾಗಿ ಇಂದು (ನ.18) ತಮ್ಮ ಬಾತ್​ಫ್ರೆಂಡ್​ ಜೊತೆ ಇರಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಶುಕ್ರವಾರ ಮುಂಬೈನಲ್ಲಿ ಭಾವಿ ದಂಪತಿಗಳ ನಿಶ್ಚಿತಾರ್ಥ ಸಮಾರಂಭವನ್ನು ನಡೆಸಿದ್ದು ಆಮೀರ್ ಖಾನ್​ ಮಾಜಿ ಪತ್ನಿ ಕಿರಣ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ಗಣ್ಯರು ಸೇರಿದ್ದರು.
ಈ ಹಿಂದೆ ಇರಾ ಮತ್ತು ನೂಪುರ್ ಶಿಖರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈಗ ಅವರ ನಿಶ್ಚಿತಾರ್ಥದ ಚಿತ್ರಗಳು ಎಲ್ಲೆಡೆ ಹರಿದಾಡುತ್ತಿವೆ. ಈ ವಿಶೇಷ ದಿನಕ್ಕಾಗಿ ಇರಾ ಖಾನ್ ಕೆಂಪು ಬಣ್ಣದ ಗೌನ್ ತೊಟ್ಟಿದ್ದರು.
ಇರಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಿಶ್ಚಿತಾರ್ಥದ ವಿಡಿಯೋ ಹಂಚಿಕೊಂಡಿದ್ದು ವಿಡಿಯೋದಲ್ಲಿ, ನೂಪುರ್ ತನ್ನ ಕೈಯಲ್ಲಿ ಉಂಗುರದೊಂದಿಗೆ ಮೊಣಕಾಲಿನ ಮೇಲೆ ನಿಂತು ಇರಾ ಅವರನ್ನು ಮದುವೆಯಾಗುವಂತೆ ಕೇಳಿದ್ದಾರೆ. ಇದನ್ನು ಕಂಡು ನೆರೆದಿದ್ದ ಎಲ್ಲಾ ಪ್ರೇಕ್ಷಕರು ಹರ್ಷೋದ್ಗಾರ ಮಾಡಿದ್ದಾರೆ. ಇರಾ ದೊಡ್ಡದಾಗಿ ‘ಹೌದು’ ಎಂದು ಹೇಳಿ ನೂಪುರ್​ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
A post shared by Ira Khan (@khan.ira)

A post shared by Ira Khan (@khan.ira)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 15 =
Remember me
