ಉತ್ತರಾಖಂಡ:ಉತ್ತರಾಖಂಡದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಇದೀಗ ಮತ್ತೊಮ್ಮೆ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಮುನ್ಸೂಚನೆಯ ಹಿನ್ನಲೆ ರಾಜ್ಯದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ:ಕುಡುಕರ ಸಂಖ್ಯೆ ಹೆಚ್ಚಾಗಿದ್ದಕ್ಕೆ ದಾವಣಗೆರೆ ಬಾರ್​ವೊಂದಕ್ಕೆ ಬಿತ್ತು ಬೀಗ…!
ಆಗಸ್ಟ್ 22 ರಿಂದ 24 ರವರೆಗೂ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯ ಮುನ್ಸೂಚನೆಯ ಹಿನ್ನಲೆ ಭಾರತೀಯ ಹವಾಮಾನ ಇಲಾಖೆ (IMD) ಇದೀಗ ಎರಡು ರಾಜ್ಯಗಳಿಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಪ್ರತ್ಯೇಕವಾಗಿ ಚಂಬಾ ಮತ್ತು ಮಂಡಿ ಜಿಲ್ಲೆಗಳ ಜಲಾನಯನ ಪ್ರದೇಶಗಳಲ್ಲಿ ಹಠಾತ್ ಪ್ರವಾಹದ ಮಧ್ಯಮ ಅಪಾಯದ ಬಗ್ಗೆ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಸೋಮವಾರ ಉತ್ತರಾಖಂಡದ ತೆಹ್ರಿ ಜಿಲ್ಲೆಯ ಚಂಬಾದಲ್ಲಿ ಭೂಕುಸಿತ ಉಂಟಾದ ಪರಿಣಾಮ ಇಬ್ಬರು ಮಹಿಳೆಯರು ಮತ್ತು 4 ತಿಂಗಳ ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇದುವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಮತ್ತೋರ್ವ ವ್ಯಕ್ತಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನವನೀತ್ ಸಿಂಗ್ ಬುಲ್ಲರೈಡ್ ತಿಳಿಸಿದ್ದಾರೆ.
ಇದನ್ನೂ ಓದಿ:ತಂದೆಯ ‘ಮೆಗಾ 156’ ಚಿತ್ರವನ್ನು ನಿರ್ಮಿಸಲಿದ್ದಾರೆ ಚಿರಂಜೀವಿ ಪುತ್ರಿ
ಮುಂದಿನ ಎರಡು ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯ ಹಿನ್ನಲೆಯಲ್ಲಿ 1 ರಿಂದ 12ನೇ ತರಗತಿವರೆಗಿನ ಎಲ್ಲಾ ಶಾಲೆಗಳು ಮತ್ತು ತೆಹ್ರಿ ಜಿಲ್ಲೆಯ ಭಿಲಂಗಾನ, ಚಂಬಾ, ನರೇಂದ್ರ ನಗರ ಮತ್ತು ಜೌನ್‌ಪುರದ ಅಂಗನವಾಡಿ ಕೇಂದ್ರಗಳನ್ನು ಮಂಗಳವಾರ ಮುಚ್ಚಲು ಆದೇಶಿಸಲಾಗಿದೆ,(ಏಜೆನ್ಸೀಸ್).
ಬಿಡುಗಡೆಗೆ ಸಜ್ಜಾಯ್ತು ತೆಲುಗು ವರ್ಷನ್​ನ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
