ತಮಿಳುನಾಡು:ತಮಿಳುನಾಡಿನ ಈಶಾನ್ಯ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿನಿಡಿಗಲ್ ಸೇರಿದಂತೆ ಐದು ಜಿಲ್ಲೆಗಳು ಮತ್ತು ನೀಲಗಿರಿಯ ಕೆಲವು ತಾಲೂಕುಗಳಲ್ಲಿ ಗುರುವಾರ (ನ.9) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ:‘ನಿರ್ಮಾಪಕರಿಗೆ ಸಲ್ಲುವ ಗೌರವ ಸಲ್ಲಲೇ ಬೇಕು’; ‘ದ ಜಡ್ಜ್​ಮೆಂಟ್’ ಬಗ್ಗೆ ತಂತ್ರಜ್ಞರು ಹೇಳಿದ್ದಿಷ್ಟು
ನೀಲಗಿರಿ ಜಿಲ್ಲೆಯ ಕೋಟಗಿರಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ಇದರಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಘಟನೆಯ ಬೆನ್ನಲ್ಲೇ ವಾಹನ ಸವಾರರಿಗೆ ಇದೀಗ ಬದಲಿ ಮಾರ್ಗವನ್ನು ನೀಡಲಾಗಿದೆ.
ಈ ಮಧ್ಯೆ ಭಾರೀ ಮಳೆಯಿಂದಾಗಿ ಕಲ್ಲರ್ ಮತ್ತು ಅಡ್ಡೆರ್ಲಿ ನಡುವೆ ಹಳಿ ಅಡಿಯಲ್ಲಿ ಮಣ್ಣು ಕೊಚ್ಚಿಹೋಗಿದ್ದರಿಂದ ನೀಲಗಿರಿ ಪರ್ವತ ರೈಲ್ವೆ ವಿಭಾಗದಲ್ಲಿ ಎರಡು ರೈಲುಗಳನ್ನು ಸದ್ಯ ರದ್ದುಗೊಳಿಸಲಾಗಿದೆ. ಮಧುರೈನ ಹಲವು ಭಾಗಗಳು ಜಲಾವೃತಗೊಂಡಿದ್ದು, ಗುರುವಾರ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:‘ಸಪ್ತಪದಿ’ ಇನ್ನು ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ; ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಈ ಯೋಜನೆ ವಿಸ್ತರಣೆ
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರ ಮಳೆಯಾಗಿದ್ದು, ಕಣ್ಣೂರು ಜಿಲ್ಲೆಯಲ್ಲಿ ಬುಧವಾರ (ನ.8) 7 ಸೆಂ.ಮೀ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ವರದಿ ಅನುಸಾರ, ಕೇರಳದಲ್ಲಿ ಮುಂದಿನ ಎರಡು ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ. ಅದೇ ಅವಧಿಯಲ್ಲಿ ತಮಿಳುನಾಡು ಕೂಡ ಸಾಕಷ್ಟು ಪ್ರಮಾಣದಲ್ಲಿ ಮಳೆ ದಾಖಲಿಸಲಿದೆ ಎಂದು ಹೇಳಿದೆ,(ಏಜೆನ್ಸೀಸ್).
‘ನಿರ್ಮಾಪಕರಿಗೆ ಸಲ್ಲುವ ಗೌರವ ಸಲ್ಲಲೇ ಬೇಕು’; ‘ದ ಜಡ್ಜ್​ಮೆಂಟ್’ ಬಗ್ಗೆ ತಂತ್ರಜ್ಞರು ಹೇಳಿದ್ದಿಷ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 6 =
Remember me
