ನವದೆಹಲಿ:ಕನಿಷ್ಠ ಬೆಂಬಲ ಲಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮತ್ತೊಂದು ಹಂತ ತಲುಪಿದೆ. ಇತ್ತ ರೈತರ ಪ್ರತಿಭಟನೆ ಕುರಿತು ಮಾತನಾಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಹುಲ್​ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದು ಅಧಿಕಾರಕ್ಕೆ ಬಂದಲ್ಲಿ ಎಂಎಸ್​ಪಿ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.
किसान भाइयों आज ऐतिहासिक दिन है!कांग्रेस ने हर किसान को फसल पर स्वामीनाथन कमीशन के अनुसार MSP की कानूनी गारंटी देने का फैसला लिया है।यह कदम 15 करोड़ किसान परिवारों की समृद्धि सुनिश्चित कर उनका जीवन बदल देगा।न्याय के पथ पर यह कांग्रेस की पहली गारंटी है।#KisaanNYAYGuarantee
ಇದನ್ನೂ ಓದಿ:ಚುನಾವಣೆಗೆ ಸ್ಫರ್ಧಿಸುವುದಿಲ್ಲ ಸೋನಿಯಾ; ತಾಯಿಯ ಸ್ಥಾನ ತುಂಬಲಿದ್ದಾರೆ ಪ್ರಿಯಾಂಕ
ರೈತ ಬಂಧುಗಳೇ, ಇಂದು ಐತಿಹಾಸಿಕ ದಿನವಾಗಿದ್ದು, ಸ್ವಾಮಿನಾಥನ್​ ಆಯೋಗದ ವರದಿ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಕಾನೂನನ್ನು ಜಾರಿ ಮಾಡಲು ಕಾಂಗ್ರೆಸ್​ ನಿರ್ಧರಿಸಿದೆ. ಕನಿಷ್ಠ ಬೆಂಬಲ ಬೆಲೆ ಕಾನೂನು 15 ಕೋಟಿ ರೈತ ಕುಟುಂಬಗಳ ಏಳಿಗೆಯನ್ನು ಖಾತರಿಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ.
ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ ನೀಡುತ್ತಿರುವ ಮೊದಲ ಭರವಸೆ ಇದಾಗಿದ್ದು, ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ನಡೆಯುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದಲ್ಲಿ ಕಿಸಾನ್​ ನ್ಯಾಯ್​ ಗ್ಯಾರಂಟಿ ಮಾಡುವುದಾಗಿ ರಾಹುಲ್​ ಗಾಂಧಿ ಘೋಷಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
