ಜೈಪುರ:ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕಳೆದ ಕೆಲವು ದಿನಗಳಿಂದ ಸ್ಥಿರವಾಗಿಲ್ಲ. ಸದ್ಯ ತಾವು ಸೇಫ್​ ಎಂದು ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಬಣ ಹೇಳುತ್ತಿದ್ದರೂ ಕೂಡ, ಸಚಿನ್​ ಪೈಲಟ್​ ಮತ್ತು ಅವರ ಬಣ ಒಪ್ಪುತ್ತಿಲ್ಲ. ವಿಶ್ವಾಸ ಮತ ಯಾಚನೆ ಮಾಡಿ, ಬಹುಮತ ಸಾಬೀತು ಪಡಿಸಿ ಎಂದು ಹೇಳಿದೆ.
ಈ ಮಧ್ಯೆ ಬಿಜೆಪಿ ಕೂಡ ಸಚಿನ್​ ಪೈಲಟ್​ ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ. ಆದರೆ ರಾಜಸ್ಥಾನ ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೂ, ನಮಗೂ ಸಂಬಂಧವಿಲ್ಲ. ಶಾಸಕರು, ಸಚಿನ್​ ಪೈಲಟ್​ ರೆಬಲ್​ ಆಗಿದ್ದರ ಹಿಂದೆ ನಮ್ಮದೇನೂ ಪಾತ್ರವಿಲ್ಲ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.ನಾಳೆ (ಜು.15ರಂದು) ಜೈಪುರಲ್ಲಿ ಬಿಜೆಪಿ ನಾಯಕರು ಸಭೆ ನಡೆಸಲಿದ್ದು, ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:ಕಾಶ್ಮೀರದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿತ್ತು ಸಚಿನ್​ ಪೈಲಟ್​-ಸಾರಾ ಮದುವೆ; ಅನೇಕರಿಗೆ ಗೊತ್ತಿಲ್ಲದ ಸಂಗತಿ ಇದು..
ಮುಖ್ಯವಾಗಿ ಈ ಸಭೆಯಲ್ಲಿ ರಾಜಸ್ಥಾನ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕಿ ವಸುಂಧರಾ ರಾಜೆ ಪಾಲ್ಗೊಳ್ಳಲಿದ್ದಾರೆ. ಧೋಲ್​ಪುರದಿಂದ ನಾಳೆ ಅವರು ಜೈಪುರಕ್ಕೆ ಆಗಮಿಸಿದ ಬಳಿಕ ಸಭೆ ಪ್ರಾರಂಭವಾಗಲಿದೆ ಎನ್ನಲಾಗಿದೆ. ವಸುಂಧರಾ ರಾಜೆ ನೇತೃತ್ವದಲ್ಲಿ ಸಭೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ರಾಜಸ್ಥಾನದ ಪ್ರಮುಖ ಬಿಜೆಪಿ ಲೀಡರ್​ ಆಗಿರುವ ವಸುಂಧರಾ ರಾಜೆ ಕಳೆದ ಮೂರು ದಿನಗಳಿಂದಲೂ ಜೈಪುರದಲ್ಲಿ ಇಲ್ಲ. ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೋಸ್ಕರ ನಾಳೆ ಇಲ್ಲಿಗೆ ಬರುತ್ತಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಮಹಾರಾಷ್ಟ್ರ ಕಾಂಗ್ರೆಸ್​ ನಾಯಕ ಪಕ್ಷದಿಂದಲೇ ವಜಾ; ಸಚಿನ್​ ಪೈಲಟ್​ ಬಗ್ಗೆ ಒಂದು ಟ್ವೀಟ್​ ಮಾಡಿದ್ದಕ್ಕೆ ಸಸ್ಪೆಂಡ್​ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − six =
Remember me
